Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ
    Uncategorized

    ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ.7ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟೊçÃಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ.

    Click Here

    Call us

    Click Here

    ಗರಿಷ್ಠ ತಾಪಮಾನದ ಅವಧಿಯಲ್ಲಿ ಮಧ್ಯಾಹ್ನ 12 ರಿಂದ 3 ರ ಅವಧಿಯಲ್ಲಿ ಬಿಸಿಲಿಗೆ ಹೋಗುವುದನ್ನು ಆದಷ್ಟು ಕಡಿಮೆ ಮಾಡಬೇಕು. ಶ್ರಮದಾಯಕ ಚಟುವಟಿಕೆಗಳಲ್ಲಿ ತೊಡಗಬಾರದು. ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು. ಹಗುರ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸಬೇಕು. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ರಕ್ಷಣೆಗಾಗಿ ಕನ್ನಡಕ, ಕೊಡೆ, ಬೂಟು / ಚಪ್ಪಲಿಗಳನ್ನು ಬಳಸಬೇಕು.

    ಪ್ರಯಾಣದ ಸಂದರ್ಭದಲ್ಲಿ ನೀರಿನ್ನು ಜೊತೆಗೆ ಕೊಂಡೊಯ್ಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ನಂತಹ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಸೇವಿಸಬೇಕು.

    ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಹಾಗೂ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನ್ನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿಯೇ ತಯಾರಿಸಿದ ಪಾನೀಯ ಹಾಗೂ ಓ.ಆರ್.ಎಸ್ ಅನ್ನು ಬಳಸಬೇಕು. ಸಾಕು ಪ್ರಾಣಿಗಳನ್ನು ನೆರಳಿನಲ್ಲಿರಿಸಿ, ಅವುಗಳಿಗೆ ಸಾಕಷ್ಟು ಕುಡಿಯಲು ನೀರು ನೀಡಬೇಕು.

    ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್ಗಳು ಅಥವಾ ಸನ್ಶೆಡ್ಗಳನ್ನು ಬಳಸಬೇಕು ಹಾಗೂ ಆಗಿಂದಾಗ್ಗೆ ತಣ್ಣೀರು ಸ್ನಾನ ಮಾಡಬೇಕು. ಮನೆಯಿಂದ ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ, ಟೋಪಿ ಅಥವಾ ಕ್ಯಾಪ್, ಹೆಡ್ಕವರ್, ಹ್ಯಾಂಡ್ಟವೆಲ್, ಹ್ಯಾಂಡ್ಪಾö್ಯನ್, ಎಲೆಕ್ಟೊçÃಲೈಟ್, ಗ್ಲೋಕೋಸ್, ಓ.ಆರ್.ಎಸ್ ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯುವಂತೆ ನಾಗರಿಕರನ್ನು ಪ್ರೋತ್ಸಾಹಿಸಬೇಕು.

    Click here

    Click here

    Click here

    Click Here

    Call us

    Call us

    ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಎಡೆರ್ನಾ (ಊತ) ಮತ್ತು ಮೂರ್ಛೆ ಹೋಗುವುದು, ಆಯಾಸ, ದೌರ್ಬಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕಲಿಕೆ, ವಾಂತಿ, ಸ್ನಾಯು ಸೆಳೆತ, ಬೆವರುವುದು ದೇಹದ ಉಷ್ಣತೆ ಹೆಚ್ಚಾಗುವುದು, ಉಸಿರಾಟದಲ್ಲಿ ವ್ಯತ್ಯಯ ಹಾಗೂ ಪ್ರಜ್ಞೆ ತಪ್ಪುವುದು ಸಂಭವಿಸಲಿದ್ದು, ಈ ಸಂದರ್ಭದಲ್ಲಿ ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸಬೇಕು ಅಥವಾ ತಂಪಾದ ಒದ್ದೆ ಬಟ್ಟೆಯನ್ನು ಆ ವ್ಯಕ್ತಿಯ ಮೇಲೆ ಹಾಕಬೇಕು. ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು. ವ್ಯಕ್ತಿಯ ಬಟ್ಟೆಯನ್ನು ಸಡಿಲಗೊಳಿಸಿ, ತಂಪಾದ ಗಾಳಿಯ ವ್ಯವಸ್ಥೆಯನ್ನು ಮಾಡಬೇಕು. ವ್ಯಕ್ತಿಯು ಪ್ರಜ್ಞೆ ಹೊಂದಿದ್ದರೆ ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓ.ಆರ್.ಎಸ್, ನಿಂಬೆ ಪಾನಕ ನೀಡಬೇಕು. ಹೀಟ್ ವೇವ್ ಸ್ಟೋಕ್ ಗೆ ಒಳಗಾದ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವAತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

    22/05/2026

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026
    Leave A Reply Cancel Reply

    19 + 20 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.