ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕದ್ವಯರು ಹಾಗೂ ಬಿಜೆಪಿ ಮುಖಂಡರು ಪಾದಯಾತ್ರೆ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಮತ ಯಾಚನೆ ಮಾಡಿದರು.
ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದಿಂದ ಮೀನುಗಾರಿಕೆ ಬಂದರು ಪ್ರದೇಶದ ತನಕ ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ ಯಾಚಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಬಿಜೆಪಿ ಹಿರಿಯ ಮುಖಂಡರು, ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಗಮನಿಸಿ, ಮತ್ತೊಮ್ಮೆ ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನ ಮಂತ್ರಿಯನ್ನಾಗಿ ನೋಡಲು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಅತ್ಯಧಿಕ ಬಹುಮತದೊಂದಿಗೆ ಆಯ್ಕೆ ಮಾಡುವಂತೆ ಅವರು ಮನವಿ ಮಾಡಿದರು.
ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಕುಂಪಲ, ಮಂಗಳೂರು ಬಿಜೆಪಿ ಸಹಪ್ರಭಾರಿ ರಾಜೇಶ ಕಾವೇರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಅರುಣ ಬಾಣ, ದಕ ಜಿಲ್ಲಾ ಬಿಜೆಪಿ ಖಜಾಂಚಿ ಸಂಜಯ್ ಪ್ರಭು, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ವಿನೋದ ಭಂಡಾರಿ, ಬಿಜೆಪಿ ಮುಖಂಡರಾದ ಆನಂದ ಖಾರ್ವಿ, ಶರತ್ ಕುಮಾರ್ ಶೆಟ್ಟಿ, ಅನೂರ್ ಮೆಂಡನ್, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವೀಂದ್ರ ಖಾರ್ವಿ, ತ್ರಾಸಿ ಗ್ರಾಪಂ ಅಧ್ಯಕ್ಷ ಮಿಥುನ್ ದೇವಾಡಿಗ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಗಂಗೊಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಗ್ರಾಪಂ ಮಾಜಿ ಸದಸ್ಯರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.