Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಸಿಗಾಳಿ ಹೊಡೆತದಿಂದ ತಪ್ಪಿಸಿಕೊಳ್ಳಿ. ಆರೋಗ್ಯ ರಕ್ಷಣೆಗೆ ಸಲಹೆ, ಸೂಚನೆ
    ಉಡುಪಿ ಜಿಲ್ಲೆ

    ಬಿಸಿಗಾಳಿ ಹೊಡೆತದಿಂದ ತಪ್ಪಿಸಿಕೊಳ್ಳಿ. ಆರೋಗ್ಯ ರಕ್ಷಣೆಗೆ ಸಲಹೆ, ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ,ಮೇ.03:
    ಅತಿಯಾದ ಉಷ್ಣತೆ ಮತ್ತು ಬಿಸಿಗಾಳಿಯಿಂದ ರಕ್ಷಣೆ ಪಡೆಯಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತವು ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು ನೀಡಿರುತ್ತದೆ.

    Click Here

    Call us

    Click Here

    ಬಾಯಾರಿಕೆ ಇಲ್ಲದಿದ್ದರೂ ಸಹಾ ಹೆಚ್ಚು ನೀರನ್ನು ಆಗಾಗ್ಗೆ ಕುಡಿಯಬೇಕು. ಮೌಖಿಕ ಪುನರ್ಜಲೀಕರಣ ದ್ರಾವಣ (ಓ.ಆರ್.ಎಸ್), ಎಳನೀರು ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಶರಬತ್ತು, ಹಣ್ಣಿನ ರಸಗಳು, ಮಜ್ಜಿಗೆ/ಲಸ್ಸಿಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಬೆರೆಸಿ ಸೇವಿಸಬೇಕು ಮತ್ತು ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು, ತರಕಾರಿಗಳನ್ನು ಸೇವಿಸುವುದು ಸೂಕ್ತ.

    ತಿಳಿಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಹಾಗೂ ಗಾಳಿಯಾಡುವ ಪಾದರಕ್ಷೆಗಳನ್ನು ಧರಿಸುವುದು ಈ ಸಂದರ್ಭದಲ್ಲಿ ಉತ್ತಮ. ಬಿಸಿಲಿನಲ್ಲಿ ಹೊರಹೋಗುವ ಸಂದರ್ಭದಲ್ಲಿ ಛತ್ರಿ, ಟೋಪಿ, ಟವೆಲ್, ತಂಪು ಕನ್ನಡಕಗಳನ್ನು ಬಳಸಬೇಕು.

    ಸಾಧ್ಯವಾದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಹಾಗೂ ಸಂಜೆ 4 ಗಂಟೆಯ ನಂತರಕ್ಕೆ ಸೀಮಿತವಿರುವಂತೆ ಹೊರಾಂಗಣ ಚಟುವಟಿಕೆಗಳನ್ನು ಯೋಜಿಸಿಕೊಳ್ಳುವುದು ಸೂಕ್ತವಾಗಿದ್ದು, ಮಧ್ಯಾಹ್ನ 12 ಗಂಟೆಯಿAದ 4 ಗಂಟೆಯವರೆಗೆ ಬಿಸಿಲಿನಲ್ಲಿ ಓಡಾಡುವುದು ಆದಷ್ಟು ತಪ್ಪಿಸಬೇಕು. ಸಾಧ್ಯವಾದಷ್ಟು ಗಾಳಿ ಬೀಸುವ, ತಣ್ಣಗಿರುವ ಹಾಗೂ ನೆರಳಿನ ಪ್ರದೇಶದಲ್ಲಿರಬೇಕು. ಮನೆಯಲ್ಲಿ ಕಿಟಕಿ ಪರದೆಗಳು, ಫ್ಯಾನ್, ಕೂಲರ್ ಹಾಗೂ ಎ.ಸಿ.ಯನ್ನು ಬಳಸಬೇಕು.

    ಅತಿಯಾದ ಉಷ್ಣತೆಯಿಂದ ನವಜಾತ ಶಿಶುಗಳು ಮತ್ತು ಮಕ್ಕಳು, ಗರ್ಭಿಣಿಯರು, ಹಿರಿಯ ನಾಗರಿಕರು, ಹೃದ್ರೋಗ ಹಾಗೂ ರಕ್ತದ ಒತ್ತಡಗಳಂತಹ ಧೀರ್ಘಕಾಲೀನ ಆರೋಗ್ಯ ಸಮಸ್ಯೆಗಳಿರುವವರು ಮತ್ತು ಹೊರಾಂಗಣದಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಅಪಾಯವಿರುವ ಹಿನ್ನಲೆ, ಇವರ ಬಗ್ಗೆ ಹೆಚ್ಚಿನ ಗಮನಹರಿಸಬೇಕು.

    Click here

    Click here

    Click here

    Call us

    Call us

    ಬಿಸಿಲಿನ ಪ್ರಖರತೆ ಹೆಚ್ಚಾಗಿರುವ ಈ ಅವಧಿಯಲ್ಲಿ ಚಿಕ್ಕಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯಬಾರದು. ಹಗಲಿನಲ್ಲಿ 11 ಗಂಟೆಯಿAದ 4 ಗಂಟೆಯವರೆಗೆ ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡುವುದನ್ನು ತಪ್ಪಿಸಬೇಕು. ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬಾರದು. ಮದ್ಯಪಾನ, ಕಾಫಿ, ಟೀ, ಕಾರ್ಬೋನೇಟೆಡ್ ಪಾನೀಯಗಳಿಂದ ದೂರವಿರಬೇಕು. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು.

    ತಣ್ಣನೆಯ ನೀರಿನಲ್ಲಿ ಸ್ನಾನ ಮಾಡಬೇಕು. ಬಾಯಿ ಒಣಗುವುದು, ವಿಪರೀತ ಸುಸ್ತು, ತಲೆ ಸುತ್ತು ಬರುವುದು, ಪ್ರಜ್ಞೆ ತಪ್ಪುವುದು, ಏರುಗತಿಯ ಉಸಿರಾಟ ಮತ್ತು ಹೃದಯ ಬಡಿತ, ವಾಕರಿಕೆ ಅಥವಾ ವಾಂತಿಯಾಗುವುದು ಇತ್ಯಾದಿ ಲಕ್ಷಣಗಳಿದ್ದಲ್ಲಿ ಕೂಡಲೇ ಹತ್ತಿರದ ಸರಕಾರಿ ಅಥವಾ ಖಾಸಗಿ ಆರೋಗ್ಯ ಸಂಸ್ಥೆಗಳನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ತುರ್ತು ಸಂದರ್ಭದಲ್ಲಿ ಇದ್ದಲ್ಲಿ 108 ಕ್ಕೆ ಕರೆ ಮಾಡಬೇಕು ಹಾಗೂ ಅಗತ್ಯ ಮಾಹಿತಿಗಳಿಗಾಗಿ 102 ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.

    ಡೆಂಗ್ಯೂ ಜ್ವರ ನಿಯಂತ್ರಣ: ಪ್ರಸ್ತುತ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರವು ವ್ಯಾಪಕವಾಗಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಯಾವುದೇ ಜ್ವರವಿರಲಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.

    ಡೆಂಗ್ಯೂ ಖಾಯಿಲೆಯನ್ನು ಹರಡುವ ಈಡಿಸ್ ಸೊಳ್ಳೆಯನ್ನು ನಿಯಂತ್ರಿಸಲು ಮನೆಯ ಒಳಾಂಗಣ ಮತ್ತು ಹೊರಾಂಗಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು ಶೇಖರಿಸಿಡುವ ಪರಿಕರಗಳಾದ ತೊಟ್ಟಿ, ಡ್ರಂ, ಬ್ಯಾರೆಲ್ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಒಣಗಿಸಿ ಮತ್ತೆ ಭರ್ತಿ ಮಾಡಿ ಮುಚ್ಚಿಡಬೇಕು. ಘನ ತ್ಯಾಜ್ಯಗಳಾದ ಟೈರು, ಟ್ಯೂಬ್ ತೆಂಗು ಮತ್ತು ಎಳನೀರಿನ ಚಿಪ್ಪುಗಳು, ಅನುಪಯುಕ್ತ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಫ್ರೀಡ್ಸ್, ಕೂಲರ್, ಹೂವಿನಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವ ಮೂಲಕ ಸಾರ್ವಜನಿಕರು ಡೆಂಗ್ಯೂ ಕಾಯಿಲೆ ಬಾರದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಕಾರ್ಮಿಕರುಗಳಿಗೆ ಸಲಹೆ:
    ಪ್ರಸ್ತುತ ಬೇಸಿಗೆ ಹಿನ್ನೆಲೆ, ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಹೊರಗಡೆ ಕೆಲಸ ನಿರ್ವಹಿಸುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ, ಬೀದಿ ಬದಿ ವ್ಯಾಪಾರಸ್ಥರ, ವಾಹನ ಚಾಲಕರ ಮತ್ತು ಇತರೆ ವರ್ಗದ ಎಲ್ಲಾ ಕೆಲಸಗಾರರ ಆರೋಗ್ಯವನ್ನು ಕಾಪಾಡುವ ಮತ್ತು ಸುರಕ್ಷತೆಯನ್ನು ಒದಗಿಸುವ ದೃಷಿಯಿಂದ ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣದಾರ ಮತ್ತು ಇತರೆ ಉದ್ದಿಮೆಗಳ ಮಾಲಿಕರಿಗೆ ಮತ್ತು ಕಾರ್ಮಿಕರಿಗೆ ಈ ಕೆಳಕಂಡ ಸಲಹೆ-ಸೂಚನೆಗಳನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ತಮ್ಮ ಸುರಕ್ಷತೆಯನ್ನು ಕಾಪಾಡುವ ಹಿನ್ನಲೆಯಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದೆ.

    ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ತಂಪಾದ ಕುಡಿಯುವ ನೀರು ಮತ್ತು ಎಲೆಕ್ಟೊçÃಲೈಟ್ ಪೂರಕಗಳ ವ್ಯವಸ್ಥೆಯನ್ನು ಮಾಲೀಕರು ಮಾಡಬೇಕು. ಡಿ-ಹೈಡ್ರೇಟೆಡ್ ಆಗದಂತೆ ಕಾರ್ಮಿಕರು ಮತ್ತು ಎಲ್ಲರೂ ಪ್ರತಿ 20 ನಿಮಿಷಗಳಿಗೊಮ್ಮೆ ಅಥವಾ ಹೆಚ್ಚು ಭಾರಿ ನೀರನ್ನು ಕುಡಿಯಬೇಕು ಹಾಗೂ ಕೆಲಸದ ಮದ್ಯದಲ್ಲಿ ವಿಶ್ರಾಂತಿ ಪಡೆದು ಕೆಲಸ ಮಾಡಲು ಗಮನ ವಹಿಸಬೇಕು. ಶ್ರಮದಾಯಕ ಮತ್ತು ಹೊರಾಂಗಣ ಚಟುವಟಿಕೆಗಳನ್ನು ತಾಪಮಾನ ಕಡಿಮೆ ಇರುವ ಸಮಯದಲ್ಲಿ, ಅಂದರೆ ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸಬೇಕು.

    ಕಾರ್ಮಿಕರು ಅದಷ್ಟು ಬೆಳಗೆ, 11 ರಿಂದ ಸಂಜೆ 4 ರವರೆಗೆ ನೇರ ಸೂರ್ಯನ ಬಿಸಿಲಿನಲ್ಲಿ ಕೆಲಸ ನಿರ್ವಹಿಸದಂತೆ ಮಾಲೀಕರು ಎಚ್ಚರ ವಹಿಸಬೇಕು. ಸಾಧ್ಯವಾದಲ್ಲಿ ಬೃಹತ್ ಕಟ್ಟಡ ಮತ್ತು ಇತರೆ ನಿರ್ಮಾಣದಾರರು ಕೆಲಸದ ಪಾಳಿಯನ್ನು ರಾತ್ರಿ ವೇಳೆ ಮಾಡಬಹುದಾಗಿರುತ್ತದೆ.

    ಹೆಚ್ಚಿನ ಬಿಸಿಲಿನ ತಾಪಮಾನವಿರುವ ಸಮಯದಲ್ಲಿ ಕಾರ್ಮಿಕರಿಗೆ ಕೆಲಸ ಮಾಡಲು ಅನುಕೂಲವಾಗುವಂತೆ ನೆರಳು ಇರುವ ಪ್ರದೇಶವನ್ನು ಮಾಲೀಕರು ಒದಗಿಸಬೇಕು ಅಥವಾ ನೌಕರರು ಮತ್ತು ಕಾರ್ಮಿಕರಿಗೆ ಕೆಲಸ ಸಮಯವನ್ನು ಕಾರ್ಮಿಕರೊಂದಿಗೆ ಸಮಾಲೋಚಿಸಿ ಮರು-ನಿಗದಿಪಡಿಸಿಕೊಳ್ಳಬೇಕು.

    ಕೆಲಸದ ಸ್ಥಳದ ಬಳಿ ವಿಶ್ರಾಂತಿ ಪಡೆಯಲು ಗಾಳಿ, ಬೆಳಕು ಮತ್ತು ಕುಡಿಯುವ ನೀರಿನ ವ್ಯವಸ್ಥೆಯೊಂದಿಗೆ ತಾತ್ಕಾಲಿಕ ಶೆಡ್ಗಳನ್ನು ಮಾಲೀಕರು ನಿರ್ಮಿಸಬೇಕು. ಕಾರ್ಮಿಕರಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹೊರಡಿಸಿದ ಆರೋಗ್ಯ ಸಲಹೆಯನ್ನು ಅನುಸರಿಸಿ, ಕಾರ್ಮಿಕರ ನಿಯಮಿತ ಆರೋಗ್ಯ ತಪಾಸಣೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು.

    ಕೆಲಸದ ಸಮಯದಲ್ಲಿ ಕಾರ್ಮಿಕರು ಆದಷ್ಟು ಹತ್ತಿಯ ಮತ್ತು ಶ್ವೇತ ವರ್ಣದ ತುಂಬು ತೋಳಿನ ಅಂಗಿ/ಬಟ್ಟೆ, ಟೋಪಿ ಮತ್ತು ಕೂಲಿಂಗ್ ಗ್ಲಾಸ್ ಧರಿಸಬೇಕು. ಒಳಾಂಗಣದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಂಬAಧಿಸಿದAತೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಮಾಲೀಕರುಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು.

    ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸುವುದರೊAದಿಗೆ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ, ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು ಉಪಯೋಗಿಸಬೇಕು. ಹೀಟ್ ವೇವ್ ಸ್ಟ್ರೋಕ್‌ಗೆ ಒಳಗಾದ ವ್ಯಕ್ತಿಯಲ್ಲಿ ಯಾವುದೇ ಸುಧಾರಣೆ ಕಂಡುಬರದಿದ್ದರೆ, ತಕ್ಷಣ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ವಹಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ
    • ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ
    • ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ದೇವಾಡಿಗ ನವೋದಯದ ಸಂಘ ಬೆಂಗಳೂರು: ದಿನದರ್ಶಿಕೆ ಬಿಡುಗಡೆ ಸಮಾರಂಭ
    • ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಸಂಪನ್ನ, ತಿರುಮಲಾಧೀಶನ್ನು ಕಣ್ತುಂಬಿಕೊಂಡ ಭಕ್ತರು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.