ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುಣಾವಣೆ: ಬೈಂದೂರಿನಲ್ಲಿ ಮಸ್ಟರಿಂಗ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಮೇ.7ರಂದು ಜರುಗಲಿದ್ದು, ಇದಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ನಡೆಸಲಾಯಿತು.

Call us

Click Here

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 246 ಮತಗಟ್ಟೆಗಳಿದ್ದು 2,40,500 ಮತದಾರರಿದ್ದಾರೆ. 9 ವಿಶೇಷ ಮತಗಟ್ಟೆಗಳನ್ನು ನಿರ್ಮಿಸಿದ್ದು 5 ಸಖಿ 1 ವಿಶೇಷ ಚೇತನ, 1 ಸಾಂಸ್ಕೃತಿಕ, ಸಾಂಪ್ರದಾಯಿಕ ಮತಗಟ್ಟೆಗಳಿವೆ.

ಚುನಾವಣೆಗಾಗಿ ಒಟ್ಟು 1192 ಅಧಿಕಾರಿಗಳಿದ್ದು 20 ಸಿಬಂದಿಗಳನ್ನು ಕಾಯ್ದಿರಿಸಲಾಗಿದೆ.598 ಆರಕ್ಷಕರಿದ್ದು 85 ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ.ಮತದಾನಕ್ಕೆ ತಯಾರಿ ಪೂರ್ಣಗೊಂಡಿದ್ದು ಮತಗಟ್ಟೆಯಲ್ಲಿ ಕುಡಿಯುವ ನೀರು, ಆರೋಗ್ಯ ಸೇರಿದಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

9 + twelve =