ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನ್ನಡದ ನಟ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟೂರು ಕೆರಾಡಿಯಲ್ಲಿ ಇಂದು ಮತದಾನ ಮಾಡಿದರು. ಕೆರಾಡಿ ಶಾಲೆಯ ಮತಗಟ್ಟೆ 135ರಲ್ಲಿ ಮತದಾನ ಮಾಡಿದ ಅವರು ಮತದಾನ ನನ್ನನ ಹಕ್ಕು ಹಾಗೂ ಜವಾಬ್ದಾರಿ ಎಂದಿದ್ದಾರೆ.
ತಾನು ಓದಿ ಸದ್ಯ ದತ್ತು ಸ್ವೀಕಾರ ಮಾಡಿರುವ ಶಾಲೆಯಲ್ಲಿ ಮತದಾನ ಮಾಡಿದ ಅವರು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮತನಾಡಿ, ನಾನು ದೇಶದ ಹಿತಕ್ಕಾಗಿ ಮತ ಹಾಕಿದ್ದೇನೆ. ಸರ್ಕಾರದ ನಿರೀಕ್ಷೆ ಬೇಡಿಕೆ ಬಗ್ಗೆ ಮಾತಾಡಲ್ಲ. ಈಗ ಅದು ರಾಜಕೀಯವಾಗುತ್ತೆ. ನನ್ನ ಜವಾಬ್ದಾರಿಯನ್ನು ಮಾಡಿದ್ದೇನೆ ಅಷ್ಟೇ ಎಂದರು.
ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಚುನಾವಣೆ ಇರುವುದರಿಂದ ಪೂರ್ತಿ ಕೆಲಸ ಮಾಡಲು ಆಗಿಲ್ಲ. ಶಾಲೆಯ ಗ್ರೌಂಡನ್ನು ಮಕ್ಕಳಿಗೆ ಆಟ ಆಡಲು ದೊಡ್ಡ ಮಾಡಿದ್ದೇವೆ. ಕಟ್ಟಡದ ಕೆಲಸ ಮತ್ತು ಪೀಠೋಪಕರಣ ಕೆಲಸ ಇನ್ನು ಆಗಬೇಕಾಗಿದೆ ಎಂದರು.
ಕಾಂತಾರ ಪ್ರಿಕ್ವೆಲ್ ಬಗ್ಗೆ ಪ್ರತಿಕ್ರಿಯಿಸಿದ ಅವರು ಜನ ಸಿನಿಮಾವನ್ನು ಥೇಟರಲ್ಲಿ ನೋಡಿದ್ರೆ ಒಳ್ಳೆಯದು. ಇತ್ತೀಚಿನ ದಿನದಲ್ಲಿ ನ್ಯೂಸ್ ಚಾನೆಲ್ ನಲ್ಲಿ ಹೆಚ್ಚು ಸಿನಿಮಾದ ಬಗ್ಗೆ ನೋಡುತ್ತಿದ್ದಾರೆ. ಕಥೆನೂ ನ್ಯೂಸ್ ಚಾನೆಲ್ ನಲ್ಲಿ ಹೇಳಿದರೆ ಕಷ್ಟ. ಚಿತ್ರದ ಬಗ್ಗೆ ಅಧಿಕೃತವಾಗಿ ಹೊಂಬಾಳೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದೆ. ನಾವು ಅಂದುಕೊಂಡಂತೆ ಕೆಲಸ ನಡೆಯುತ್ತಿದೆ. ಮೊದಲಿಗಿಂತ ದೊಡ್ಡ ಜವಾಬ್ದಾರಿ ದೊಡ್ಡ ತಂಡ ಕೆಲಸ ಮಾಡುತ್ತಿದೆ. ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್ ಗೆ ಒಂದು ಪುಣ್ಯ. ಅದ್ಭುತವಾದ ಟೆಕ್ನಿಷಿಯನ್ಸ್ ಗಳು ಕೆಲಸ ಮಾಡುತ್ತಿದ್ದಾರೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ .ಕೆಲಸ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ. ಸಿನಿಮಾ ಒಂದು ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದ ಅವರು ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಸೆಟ್ ವರ್ಕ್ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ. ಅಂತೆ ಕಂತೆಗಳ ಸುದ್ದಿ ಬಹಳಷ್ಟು ಹರಿದಾಡುತ್ತಿದೆ .ಚಿತ್ರದ ಬಗ್ಗೆ ಜನಕ್ಕೆ ನಿರೀಕ್ಷೆ ಹೋಗಬಾರದು. ಚಿತ್ರ ತೆರೆಗೆ ಬರುವ ತನಕ ಗೌಪ್ಯತೆ ಕಾಪಾಡಬೇಕು ಜನಕ್ಕೆ ಕುತೂಹಲ ಇರಬೇಕು ಎಂದರು.