ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ: ಶೇ.78.24 ಮತದಾನ, ಬೈಂದೂರಿನಲ್ಲಿ ಶೇ.76.40 ಮತದಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ರಾಜ್ಯದಲ್ಲಿ ಎರಡನೇ ಹಂತದ ಮತದಾನ ಇಂದು ನಡೆದಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.78.24 ಮತದಾನ ನಡೆದಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.76.40 ಮತದಾನ ನಡೆದಿದೆ.

Call us

Click Here

ಶಿವಮೊಗ್ಗ ಗ್ರಾಮಾಂತರದಲ್ಲಿ 83.61%, ಶಿಕಾರಿಪುರ-82.66%, ಸಾಗರ-80.2%, ಭದ್ರಾವತಿ-71.72%, ಸೊರಬ-83.27%, ತೀರ್ಥಹಳ್ಳಿ-82.23%, ಶಿವಮೊಗ್ಗ-70.33%, ಬೈಂದೂರು-76.4% ಮತದಾನವಾಗಿದೆ. ಬೆಳಿಗ್ಗೆ 9 ಗಂಟೆಯ ತನಕ ಶಿವಮೊಗ್ಗ ಕ್ಷೇತ್ರದಲ್ಲಿ ಶೇ.11.45 ಮತದಾನ, ಮಧ್ಯಾಹ್ನ 1 ಗಂಟೆಯ ತನಕ ಶೇ.45.19 ಮತದಾನ, ಮಧ್ಯಾಹ್ನ 3 ಗಂಟೆಗೆ ಶೇ.58.04 ಮತದಾನವಾಗಿದ್ದು, ಅಂತಿಮವಾಗಿ ಶೇ.78.24 ಮತದಾನವಾಗಿದೆ. ಬೈಂದೂರು ಕ್ಷೇತ್ರದಲ್ಲಿ ಹಳ್ಳಿಹೊಳೆ ಬೂತ್‌ 141ರಲ್ಲಿ ಅತಿಹೆಚ್ಚು ಶೇ.88 ಹಾಗೂ ಶಿರೂರು ಮೇಲ್ಪಂಕ್ತಿ ಬೂತ್‌ 3ರಲ್ಲಿ ಅತಿ ಕಡಿಮೆ ಶೇ.66.67 ಮತದಾನವಾಗಿದೆ. 

ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತನ್ನ ತಂದೆ, ಮಾಜೀ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಹೋದರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕುಟುಂಬಿಕರ ಜೊತೆ ಮತ ಚಲಾಯಿಸಿದರು. ಸೊರಬದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಪತ್ನಿಯೊಂದಿಗೆ ತೆರಳಿ ಮತ ಚಲಾಯಿಸಿದರು. ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕುಟುಂಬಿಕರೊಂದಿಗೆ ಮತದಾನ ಮಾಡಿದರು.

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ತಮ್ಮ ಕಂಚಿಕಾನ್ ಶಾಲೆಯ ಮತಗಟ್ಟೆಯಲ್ಲಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಅಮಾಸೆಬೈಲು ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮಾಜಿ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ ಕನ್ಯಾನದಲ್ಲಿ, ಬಿ.ಎಂ. ಸುಕುಮಾರ ಶೆಟ್ಟಿ ಮೂಡುಮಂದ ಮತಗಟ್ಟೆಯಲ್ಲಿ ಮತದಾನ ಮಾಡಿದರು. ನಟ ರಿಷಬ್ ಶೆಟ್ಟಿ ಕೆರಾಡಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬೈಂದೂರು ವಿಧಾನಸಭಾ ಕ್ಷೇತ್ರದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾದ ಹಳ್ಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳುಗೋಡು ಮತಗಟ್ಟೆ ಸಂಖ್ಯೆ 139ರಲ್ಲಿ 96 ವರ್ಷ ಪ್ರಾಯದ ವಯೋವೃದ್ಧೆ ಮತದಾನ ಮಾಡಿದರು.

Click here

Click here

Click here

Click Here

Call us

Call us

ಬೈಂದೂರು ವಿಧಾನಸಭಾ ಕ್ಷೇತ್ರದ ಒಟ್ಟು 246 ಮತಗಟ್ಟೆಗಳ ಪೈಕಿ 70 ಸೂಕ್ಷ್ಮ ಮತಗಟ್ಟೆ ಇದೆ. ಅದರಲ್ಲಿ 19 ಮತಗಟ್ಟೆ ನಕ್ಸಲ್ ಪೀಡಿತ ಮತಗಟ್ಟೆ ಇದ್ದು, ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಕೇಂದ್ರ ಸಶಕ್ತ ಮೀಸಲು ಪಡೆ ನಿಯೋಜಿಸಲಾಗಿತ್ತು. ಎಲ್ಲೆಡೆಯೂ ಶಾಂತಿಯುತ ಮತದಾನ ನಡೆದಿದೆ. ಮತಗಟ್ಟೆಗಳಲ್ಲಿ ಕುಡಿಯುವ ನೀರು, ವೈದ್ಯಕೀಯ ಸೌಲಭ್ಯವನ್ನು ಒದಗಿಸಲಾಗಿತ್ತು.

ಬಿಜೆಪಿಯ ಸಂಕಲ್ಪದಂತೆ ವಿವಿಧ ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಸ್ವಘೋಷಿತ ನವದುರ್ಗೆಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವ ಮೂಲಕ ಮತದಾನಕ್ಕೆ ಚಾಲನೆ ನೀಡಿದರು.

Leave a Reply

Your email address will not be published. Required fields are marked *

17 + eleven =