ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ.

Call us

Click Here

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದ್ದು, ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು.

ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

Click here

Click here

Click here

Click Here

Call us

Call us

ದಕ್ಷಿಣ ಕನ್ನಡ ಜಿಲ್ಲೆ ಶೇ 92.12 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ, ಶಿವಮೊಗ್ಗ ಜಿಲ್ಲೆ ಶೇ 88.67, ಕೊಡಗು ಜಿಲ್ಲೆ ಶೇ 88.67 ರ ಫಲಿತಾಂಶ ದಾಖಲಿಸಿವೆ.

Leave a Reply