ಕುಂದಾಪ್ರ ಡಾ ಕಾಂ ಸುದ್ದಿ
ಶಂಕರನಾರಾಯಣ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.
ಒಟ್ಟು 54 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಶಾಲೆಯ ವಿದ್ಯಾರ್ಥಿನಿ ಪ್ರಣಮಿ 615 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಹತ್ತನೇ ರ್ಯಾಂಕ್ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿನಿ ಮಹಿಮ 612 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಹದಿಮೂರನೇ ರ್ಯಾಂಕ್ ಪಡೆದಿರುತ್ತಾರೆ.
ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.