ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಶರಣ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಸಂಯೋಜಕರಾದ ರಿತಿನ್ ಎಸ್. ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಘಟಕದ ಕಾರ್ಯಕ್ರಮಾಧಿಕಾರಿ ವಿದ್ಯಾರಾಣಿ ವಂದಿಸಿದರು.
ಎನ್.ಸಿ.ಸಿ ಕೆಡೆಟ್ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.















