ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮೊದಲ ಬಾರಿಗೆ “ಭಂಡಾರ್ಕಾರ್ಸ್ ಪ್ರೀಮಿಯರ್ ಲೀಗ್” ಪಂದ್ಯ ವಿದ್ಯಾರ್ಥಿಗಳಿಗಾಗಿ ಜರುಗಿತು.
ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಂದಾಪುರ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ʼನ ಅಧ್ಯಕ್ಷ ಗೌತಮ್ ಶೆಟ್ಟಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಂ ಉಪಸ್ಥಿತರಿದ್ದರು.
ಕಾಲೇಜಿನ ದೈಹಿಕ ನಿರ್ದೇಶಕರಾದ ಶಂಕರನಾರಾಯಣ ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಮೀಳಾ ವಂದಿಸಿದರು. ವಿದ್ಯಾರ್ಥಿನಿ ಖುಷಿ ಕಾರ್ಯಕ್ರಮ ನಿರೂಪಿಸಿದರು.
ಐಪಿಎಲ್ ಮಾದರಿಯಲ್ಲಿ 150 ವಿದ್ಯಾರ್ಥಿ ಆಟಗಾರರನ್ನು 10 ತಂಡಗಳನ್ನಾಗಿ ರಚಿಸಿ 4 ಓವರ್ ಗಳ ಮ್ಯಾಚ್, 3 ದಿನಗಳ ಕಾಲ ನಡೆಯಸಲಾಯಿತು.















