ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಗಣಿತ ವಿಭಾಗದ ಮುಖ್ಯಸ್ಥೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳ ಸಂಯೋಜಕರಾಗಿ ನಿರ್ಮಲಾ ಕುಮಾರಿ ಬಿ. ಅವರನ್ನು ನಿಯೋಜಿಸಲಾಗಿದೆ.
ನಿರ್ಮಲಾ ಅವರು ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾಗಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳ ಸಂಯೋಜಕರಾಗಿ ಸುದೀರ್ಘ 23 ವರ್ಷಗಳ ಸೇವಾ ಅನುಭವವನ್ನು ಹೊಂದಿರುತ್ತಾರೆ. ಅದರೊಂದಿಗೆ ಮಂಗಳೂರಿನ ಬೋಸ್ಕೋಸ್ ಕಾಲೇಜಿನಲ್ಲಿ ಇದೇ ಕಾಯಕದ 3 ವರ್ಷದ ಸೇವಾ ಅನುಭವ ಹೊಂದಿರುತ್ತಾರೆ.
ಗಣಿತ ವಿಷಯದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದು ಗಣಿತದ ಸಾಧನೆಗಾಗಿ ಹತ್ತು ಹಲವು ಪುರಸ್ಕಾರಗಳನ್ನ ಪಡೆದಿರುವ ಇವರು ಈ ಶೈಕ್ಷಣಿಕ ವರ್ಷದಲ್ಲಿ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತ ವಿಷಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡಿದ್ದಾರೆ.
ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಾಯರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಪಾಲಕರು ಶುಭ ಹಾರೈಸಿದ್ದಾರೆ.