ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ,ಮೇ.14
: ಮಳೆಯಿಂದ ಉಂಟಾಗುವ ನೆರೆ, ಸಿಡಿಲು-ಬಡಿತ ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪಗಳಲ್ಲಿ ಮಾನವಹಾನಿ ಹಾಗೂ ಹೆಚ್ಚಿನ ಆಸ್ತಿ-ಪಾಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

Call us

Click Here

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಜ್ಯದಾದ್ಯಂತ ಮುಂಬರುವ ದಿನಗಳಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗುವುದರ ಜೊತೆಗೆ ನೆರೆ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

ಪೂರ್ವ ಮುಂಗಾರು ಸಮಯದಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಸಂದರ್ಭದಲ್ಲಿ ಮಳೆ, ಗುಡುಗು, ಮಿಂಚು ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಜೀವಹಾನಿಯಾಗದಂತೆ ತಡೆಯಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳುವಂತೆ ತಿಳಿಸಿದ ಅವರು, ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕಗಳ ಮೂಲಕ ಸುರಕ್ಷತಾ ಕ್ರಮ ಕೈಗೊಳ್ಳುವ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು ಎಂದರು.

ಮಳೆಗಾಲದಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ನೀರು ಎಲ್ಲೆಂದರಲ್ಲಿ ನಿಲ್ಲದಂತೆ ನೋಡಿಕೊಳ್ಳಬೇಕು. ಸಾಂಕ್ರಾಮಿಕ ರೋಗಗಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ದಾಸ್ತಾನು ಇಟ್ಟುಕೊಂಡಿರಬೇಕು. ಇವುಗಳ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Click here

Click here

Click here

Click Here

Call us

Call us

ಹೆದ್ದಾರಿ ಸೇರಿದಂತೆ ಇತರೆ ರಸ್ತೆಗಳ ಮೇಲೆ ಮಳೆ ಗಾಳಿಯಿಂದ ದೊಡ್ಡ ದೊಡ್ಡ ಮರಗಳು ಉರುಳಿ ಬಿದ್ದಾಗ ತಕ್ಷಣಕ್ಕೆ ಸ್ಪಂದಿಸಿ, ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಹಾಗೂ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಗಾಲದ ಮೊದಲು ಯಾಂತ್ರೀಕೃತ ದೋಣಿಗಳನ್ನು ಬಳಸಿಕೊಂಡು ಮಾಡುವ ಮೀನುಗಾರಿಕೆಯನ್ನು ಹಾಗೂ ಆಳ ಸಮುದ್ರದ ಮೀನುಗಾರಿಕೆಯನ್ನು ನಿಷೇಧಿಸಬೇಕು. ಹವಾಮಾನ ಇಲಾಖೆಯಿಂದ ಬರುವ ಸಂದೇಶಗಳನ್ನು ಮೀನುಗಾರರಿಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುರ್ತು ನಿಗಾ ಘಟಕಕ್ಕೆ ಅಗತ್ಯವಿರುವ ಸಾಮಾಗ್ರಿ ಹಾಗೂ ಕಮ್ಯುನಿಕೇಷನ್ ಪ್ಲಾನ್ಗಳನ್ನು ಗ್ರಾಮವಾರು ತಯಾರಿಸಿ ಇಟ್ಟುಕೊಳ್ಳಬೇಕು. ಈಜುಗಾರರು ಹಾಗೂ ಸ್ವಯಂ ಸೇವಕರ ಸಂಪೂರ್ಣ ಮಾಹಿತಿಯನ್ನು ಪಡೆದಿಟ್ಟುಕೊಳ್ಳಬೇಕು. ಸೂಕ್ತ ಪ್ರದೇಶದಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಿ, ಸನ್ನದ್ದು ಸ್ಥಿತಿಯಲ್ಲಿಟ್ಟುಕೊಳ್ಳಬೇಕು ಹಾಗೂ ಈ ಕೇಂದ್ರಗಳನ್ನು ನಿಭಾಯಿಸಲು ಅಗತ್ಯ ಸಿಬ್ಬಂದಿಗಳನ್ನು ಗುರುತಿಸಿಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮಳೆಗಾಲ ಪ್ರಾರಂಭವಾಗುವ ಮುನ್ನ ಜಿಲ್ಲೆಯ ಎಲ್ಲಾ ಗ್ರಾಮೀಣ, ಸ್ಥಳೀಯ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ಚರಂಡಿ ಹಾಗೂ ತೋಡುಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಕಂಟ್ರೋಲ್ ರೂಂ ಗಳು ದಿನದ 24 ಗಂಟೆಗಳಲ್ಲಿಯೂ ತೆರೆದಿದ್ದು, ದೂರುಗಳು ಬಂದಲ್ಲಿ ಕೂಡಲೇ ಸ್ಪಂದಿಸಬೇಕು ಎಂದರು.

ಭೂ ಕುಸಿತವಾಗುವಂತಹ ಪ್ರದೇಶಗಳನ್ನು ಗುರುತಿಸಿಕೊಂಡು ಒಂದೊಮ್ಮೆ ಭೂ ಕುಸಿತಗಳು ಆಗುವ ಸಾಧ್ಯತೆಗಳು ಇದ್ದಲ್ಲಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಂಡು ಭೂ ಕುಸಿತ ಆಗದಂತೆ ಎಚ್ಚರವಹಿಸಬೇಕು. ಅಕಸ್ಮಿಕವಾಗಿ ಭೂ ಕುಸಿತ ಉಂಟಾದಲ್ಲಿ ಅವುಗಳ ತೆರವಿಗೆ ಅಗತ್ಯ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ 24 ಗಂಟೆಯ ಒಳಗಾಗಿ ಸ್ಪಂದಿಸಬೇಕು. ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಗಳನ್ನು ಆಗಿಂದಾಗ್ಗೆ ಕರೆದು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇದಕ್ಕೆ ಅಗತ್ಯವಿರುವ ಅನುದಾನವು ತಾಲೂಕಿನ ತಹಶೀಲ್ದಾರ್ಗಳ ವಿಪತ್ತು ಪಿ.ಡಿ ಖಾತೆಯಲ್ಲಿ 1.5 ಕೋಟಿಯಷ್ಟು ಹಣ ಲಭ್ಯವಿದೆ ಎಂದರು.

ಮರಗಳು ಬಿದ್ದು ವಿದ್ಯುತ್ ಸಂಚಾರ ಸ್ಥಗಿತಗೊಂಡರೆ ಪುನರ್ ಸಂಪರ್ಕವನ್ನು ಶೀಘ್ರದಲ್ಲಿಯೇ ಕಲ್ಪಿಸಬೇಕು. ವಿದ್ಯುತ್ ತಂತಿಗೆ ಅಡಚಣೆ ಉಂಟುಮಾಡುವ ಮರಗಳ ಕೊಂಬೆಗಳನ್ನು ಜಂಗಲ್ ಕ್ಲಿಯರೆನ್ಸ್ ಅನ್ನು ಕೈಗೊಳ್ಳಬೇಕು ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರಕಾರದ ಬಾವಿ, ಕೊಳವೆಬಾವಿಗಳಲ್ಲಿ ನೀರು ಇಂಗುವಂತೆ ಮಳೆ ನೀರು ಕೊಯ್ಲುಗಳನ್ನು ಅಳವಡಿಸಬೇಕು. ಬಾವಿ ಹಾಗೂ ಕೆರೆಗಳ ಹೂಳೆತ್ತುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಂತರ್ಜಲ ಹೆಚ್ಚಲು ಸಾಧ್ಯ. ಜಿಲ್ಲೆಯಲ್ಲಿ 4000 ಮಿ.ಮೀ ಗೂ ಹೆಚ್ಚು ಮಳೆ ಆದರೂ ಸಹ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿರುವುದು ವಿಪರ್ಯಾಸ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತ ದೇವಿ ಜಿ ಎಸ್, ಸಹಾಯಕ ಕಮೀಷನರ್ ರಶ್ಮಿ ಎಸ್, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಬೈಂದೂರು ತಹಶೀಲ್ದಾರ್‌ ಪ್ರದೀಪ್‌, ಕುಂದಾಪುರ ತಹಶೀಲ್ದಾರ್‌ ಶೋಭಾಲಕ್ಷ್ಮೀ ಸೇರಿದಂತೆ ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಇ. ಓ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply