ಅವಕಾಶಗಳ ಸದ್ಭಾಳಕೆಯಿಂದ ಯಶಸ್ಸು ಸಾಧ್ಯ: ಐಶ್ವರ್ಯ ಕೋಟ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳು ಶಾಲಾ ಪಠ್ಯದ ಜೊತೆ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಾಗ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಚಿತ್ರಕಲಾ ಶಿಕ್ಷಕಿ ಐಶ್ವರ್ಯ ಕೋಟ ಅವರು ಹೇಳಿದರು.

Call us

Click Here

ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮೂರು ದಿನಗಳ ಆರ್ಟ್ ಕ್ಯಾಂಪ್ ಆರಾಧನಾ-2024 (ಬೆರಳುಗಳಲ್ಲಿ ಭಾವಗೀತೆ) ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಿಭಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಶಿಬಿರಾರ್ಥಿಗಳಾದ ಶರಧಿ ಎಸ್, ಮಾನಸ ಜಿ, ಮೇದಿನಿ ಅವರು ಆರ್ಟ್ ಕ್ಯಾಂಪ್ನ ಅನಿಸಿಕೆಯನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಬಣ್ಣಗಳ ಮಿಶ್ರಣದಿಂದ ಹೊಸ ಬಣ್ಣವಾಗುವಂತೆ ನೋವು ನಲಿವುಗಳನ್ನು ಸರಿಸಮವಾಗಿ ಸ್ವೀಕರಿಸಿ ನಮ್ಮ ಗುರಿಯತ್ತಾ ಮನಸ್ಸು ಕೇಂದ್ರೀಕರಿಸಿಕೊಳ್ಳಬೇಕು ಎಂದರು.

ಕೋಟತಟ್ಟು ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕಿ ಶೈಲಜಾ ಕೆ ಎನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಸತೀಶ್ ವಡ್ಡರ್ಸೆ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply