Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂನ್‌ 07 ಮತ್ತು 08ಕ್ಕೆ ಮೂಡುಬಿದಿರೆಯಲ್ಲಿ ಆಳ್ವಾಸ್‌ ಪ್ರಗತಿ – ಬೃಹತ್‌ ಉದ್ಯೋಗ ಮೇಳ
    alvas nudisiri

    ಜೂನ್‌ 07 ಮತ್ತು 08ಕ್ಕೆ ಮೂಡುಬಿದಿರೆಯಲ್ಲಿ ಆಳ್ವಾಸ್‌ ಪ್ರಗತಿ – ಬೃಹತ್‌ ಉದ್ಯೋಗ ಮೇಳ

    Updated:24/05/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಆಳ್ವಾಸ್ ಶಿಕ್ಷಣ ಪತಿಷ್ಠಾನದವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳದ14ನೇ ಆವೃತ್ತಿ, ಜೂನ್ 7 ಹಾಗೂ 8ರಂದು ಮೂಡುಬಿದಿರೆಯ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ. 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಲಿರುವ ಉದ್ಯೋಗಮೇಳದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ನೊಂದಣಿ ಇರಲಿದ್ದು, ವಿವಿಧ ಉದ್ಯೋಗ ವಲಯದ ಸಂದರ್ಶನವನ್ನು ಎದುರಿಸಬಹುದಾಗಿದೆ ಎಂದು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಕುಂದಾಪುರದ ಪ್ರೆಸ್ ಕ್ಲಬ್’ನಲ್ಲಿ ಶುಕ್ರವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶೈಕ್ಷಣಿಕ ಕ್ಷೇತ್ರದ ಉತ್ಕೃಷ್ಟ ಉದಾಹರಣೆಯಾಗಿ, ಇಡೀ ದೇಶದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಾಧನೆಗಳಿಂದ ಹೆಗ್ಗುರುತಾಗಿ ಬೆಳೆಯುತ್ತಿದೆ. `ಆಳ್ವಾಸ್ ಪ್ರಗತಿ’ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2007ರಿಂದ ನಡೆಸಿಕೊಂಡು ಬರುತ್ತಿರುವ ಬೃಹತ್ ಉದ್ಯೋಗ ಮೇಳವಾಗಿದ್ದು, ಸಂಸ್ಥೆಯ ಸಿಎಸ್‌ಆರ್ ಚಟುವಟಿಕೆಯ ಭಾಗವಾಗಿ ಗ್ರಾಮೀಣ ಭಾಗದ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ಉಚಿತವಾಗಿ ವಿಶೇಷ ಔದ್ಯೋಗಿಕ ನೆರವು ನೀಡುವ ಉದ್ದೇಶವನ್ನು ವ್ಯವಸ್ಥಿತವಾಗಿ ಪೂರೈಸುತ್ತಾ ಬಂದಿದೆ.

    ಸಂಸ್ಥೆಯು ಈವರೆಗೆ 20 ಬೃಹತ್ ಉದ್ಯೋಗ ಮೇಳಗಳನ್ನು ಬಹಳ ವ್ಯವಸ್ಥಿತವಾಗಿ ನಡೆಸಿಕೊಂಡು ಬಂದಿದೆ. ಸರ್ಕಾರ ಮತ್ತು ಸಾಮಾಜಿಕ ಸಂಸ್ಥೆಗಳ ಸಹಯೋಗದೊಂದಿಗೆ ಚಿಕ್ಕಬಳ್ಳಾಪುರ, ಮಂಗಳೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಇದಕ್ಕಾಗಿ ಈವರೆಗೆ ಸುಮಾರು 5 ಕೋಟಿಗಳಷ್ಟು ಹಣವನ್ನು ವ್ಯಯಿಸಿದೆ. ಕರ್ನಾಟಕವು ಸೇರಿದಂತೆ ಕೇರಳ, ತಮಿಳುನಾಡು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಅಭ್ಯರ್ಥಿಗಳು ಈ ಉದ್ಯೋಗ ಮೇಳದ ಹೆಚ್ಚಿನ ಲಾಭ ಪಡೆದಿದ್ದಾರೆ. ಒಟ್ಟು  1,60,000 ಆಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರೆ, 55,564 ಅಭ್ಯರ್ಥಿಗಳು ವಿವಿಧ ಕಂಪೆನಿಗಳಿಗೆ ಶಾರ್ಟ್ ಲೀಸ್ಟ್ ಗೊಂಡಿದ್ದಾರೆ.  ಪ್ರತೀ ಉದ್ಯೋಗ ಮೇಳದಲ್ಲಿ ಸುಮಾರು 200ರಷ್ಟು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡು, ಇಲ್ಲಿವರೆಗೆ ಒಟ್ಟು 31,896 ಉದ್ಯೋಗಗಳನ್ನು ನೀಡಿವೆ. ಆಳ್ವಾಸ್ ಪ್ರಗತಿಯಲ್ಲಿ ನಿರುದ್ಯೋಗ ಪರಿಹರಿಸುವ ಪ್ರಭಾವಶಾಲಿ ಪ್ರಯತ್ನವನ್ನು ಫ್ರಾನ್ಸ್ ಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ಗಮನ ಸೆಳೆದಿವೆ.

    14ನೇ ಆವೃತ್ತಿಯ `ಆಳ್ವಾಸ್ ಪ್ರಗತಿ -2024’
    ಆಳ್ವಾಸ್ ಶಿಕ್ಷಣ ಪತಿಷ್ಠಾನದವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಈ ಬಾರಿ 14ನೇ ಆವೃತ್ತಿಯದ್ದಾಗಿದ್ದು, ಜೂನ್ 7 ಹಾಗೂ 8ರಂದು ಇಲ್ಲಿನ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ. ಬ್ಯಾಂಕಿAಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು  ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿAಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ.

    ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪೆನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್‌ಸೈಟ್‌ http://alvaspragati.comನಲ್ಲಿ ಪ್ರಕಟಿಸಲಾಗಿದೆ.  ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ  ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಉಚಿತ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಆಳ್ವಾಸ್ ಸಂಸ್ಥೆಯ ಪರಿಣತ ತಂಡದಿAದ `ಆಳ್ವಾಸ್ ಪ್ರಗತಿ’ಯಲ್ಲಿ ಉದ್ಯೋಗ ನೀಡುವ ಕಂಪೆನಿಗಳ ಮಾಹಿತಿ, ಸಂದರ್ಶನಾ ಕೌಶಲ್ಯಗಳ ತರಬೇತಿಯನ್ನು ವಿವಿಧ ಕಡೆಗಳಲ್ಲಿ ನೀಡಲಾಗುವುದು. 

    Click here

    Click here

    Click here

    Call us

    Call us

    200ಕ್ಕೂ ಅಧಿಕ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇರುವುದರಿಂದ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಮುಂಚಿತವಾಗಿ ತಿಳಿಸಿ, ಅಲ್ಲಿನ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉತ್ತೇಜಿಸಲಾಗುತ್ತಿದೆ. 

    ಉತ್ತಮ ಉದ್ಯೋಗಾವಕಾಶಗಳ ಮಹಾಪೂರ:

    • ಆಳ್ವಾಸ್ ಪ್ರಗತಿಗೆ ಈವರೆಗೆ 134 ಕಂಪನಿಗಳು ನೋಂದಾಯಿಸಿಕೊAಡಿದ್ದು ಮತ್ತು ಹೆಚ್ಚುವರಿಯಾಗಿ 70 ಕಂಪನಿಗಳು ಪಾಲ್ಗೊಳ್ಳುವ ಭರವಸೆ ನೀಡಿವೆ. ಒಟ್ಟು 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ.
    • ಎಂಬಿಎ, ಎಂ.ಕಾA, ಬಿ.ಕಾಂ, ಬಿಬಿಎ, ಬಿಎಸ್ಸಿ, ಬಿಎ, ಬಿಸಿಎ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರಿಗೆ ಹೈದರಬಾದ್‌ನ ಫ್ಯಾಕ್ಟ್ಸೆಟ್ ಸಂಸ್ಥೆ, ಇಎಕ್ಸ್ಎಲ್ ಸರ್ವೀಸ್, ಮಹೀಂದ್ರಾ ಫಿನಾನ್ಸ್, ಪ್ರತಿಷ್ಠಿತ ಬ್ಯಾಂಕ್‌ಗಳಾದ ಎಚ್‌ಡಿಎಫ್‌ಸಿ, ಆ್ಯಕ್ಸಿಸ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್ ಹಾಗೂ ಇನ್ನಿತರ ಸಂಸ್ಥೆಗಳು ಬಹುಅವಕಾಶಗಳನ್ನು ನೀಡಲಿವೆ. 
    • ಲಾಜಿಸ್ಟಿಕ್ ಸಪ್ಲೆöÊ ಚೈನ್ ಕಂಪೆನಿ ಫ್ಲಿಪ್‌ಕಾರ್ಟ ಎಂಬಿಎ ಹಾಗೂ ಇಂಜಿನಿಯರಿAಗ್ ಪದವೀಧರರಿಗೆ ಅವಕಾಶ ನೀಡಲಿದೆ
    • ಪ್ರತಿಷ್ಠಿತ ಇವೈ ಕಂಪೆನಿ ಬಿಕಾಂ ಹಾಗೂ ಎಂಬಿಎ ಪದವೀಧರರನ್ನು ನೇಮಿಸಿಕೊಳ್ಳಲಿದೆ
    • ಮ್ಯಾಕ್ಸ್ ಹೈಪರ್ ಮಾರ್ಕೆಟ್, ಜಾಯ್ ಅಲುಕ್ಕಾಸ್ ಯಾವುದೇ ಪದವಿ ಹಿನ್ನಲೆಯವರನ್ನು ನೇಮಕಾತಿ ಮಾಡಿಕೊಳ್ಳಲಿದೆ. 
    • ಅಮೆಜಾನ್ ಕಂಪೆನಿ ಯಾವುದೇ ಪದವಿ ಹಿನ್ನಲೆಯವರನ್ನು ಆಯ್ಕೆ ಮಾಡಿಕೊಳ್ಳಲಿದೆ
    • ಟೆಕ್ ಮಹೇಂದ್ರ, ಎರ್ಕ್ಸ್ಪಟೈಸ್ ಕಂಪೆನಿಯು ಇಂಜಿನಿಯರಿAಗ್ ಪದವಿಯ ಉದ್ಯೋಗಾಕಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳಲಿದೆ
    • ಉತ್ಪಾದನಾ ವಲಯದಲ್ಲಿ ಕಿರ್ಲೋಸ್ಕರ್ ಟೊಯೋಟಾ ಟೆಕ್ಸಟೈಲ್ ಮೆಷಿನರಿ, ಉಷಾ ಆರ್ಮರ್ ಮುಂತಾದ ಕಂಪೆನಿಗಳು ಭಾಗವಹಿಸಲಿವೆ. 
    • ಐಟಿ ವಲಯದಲ್ಲಿ ಇನ್ಫೋಮೆಟಿಕಾ, ಇಜಿಡಿಕೆ ಪ್ರೆöÊ. ಲಿ, ವೆಲಂಕಣಿ ಸಾಫ್ಟವೇರ್  ಪ್ರೆöÊ.ಲಿ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್,  ದಿಯಾ ಸಿಸ್ಟಮ್ಸ್, 24*7ಚಿi, ಕಾನ್ಸೆಂಟ್ರಿಕ್ಸ್, ವಿನ್‌ಮ್ಯಾನ್ ಸಾಫ್ಟ್ವೇರ್ ಕಂಪೆನಿಗಳು ಯಾವುದೇ ಹಿನ್ನಲೆಯ ಪದವೀಧರರನ್ನು ನೇಮಿಸಿಕೊಳ್ಳಲಿವೆ.
    • ಮಾರಾಟ ವಲಯದಲ್ಲಿ ಕಲ್ಟ್ಫಿಟ್, ಐಟಿಸಿ ಲಿಮಿಟೆಡ್, ಬ್ಲೂಸ್ಟೋನ್ ಜ್ಯುವೆಲ್ಲರಿಗಳು ಪದವೀಧರರಿಗೆ ಉದ್ಯೋಗ ನೀಡಲಿವೆ. 
    • ಅಜಾಕ್ಸ್ ಇಂಜಿನಿಯರಿAಗ್ ಪ್ರೈವೇಟ್ ಲಿಮಿಟೆಡ್, ಬುಹ್ಲರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನೆಕ್ಸ್ಟೀರ್ ಆಟೋಮೋಟಿವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ವಂಡರ್ಲಾ ಹಾಲಿಡೇಸ್‌ನಂತಹ ಕಂಪೆನಿಗಳು ಮೆಕ್ಯಾನಿಕಲ್ ಇಂಜಿನಿಯರ್‌ಗಳಿಗೆ 50ಕ್ಕೂ ಹೆಚ್ಚಿನ ಉದ್ಯೋಗಾವಕಾಶ ನೀಡಲಿವೆ. ವೋಲ್ವೋಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಹಿಳಾ ಮೆಕ್ಯಾನಿಕಲ್ ಪದವೀಧರರಿಗೆ ಉದ್ಯೋಗ ನೀಡಲಿದೆ. 
    • ಆ್ಯಂಥಮ್ ಬಯೋ, ರೆಸಿ ಫಾರ್ಮಾ, ಹೈದರಾಬಾದ್‌ನ ಎಂಎಸ್‌ಎನ್ ಲ್ಯಾಬೋರೇಟರೀಸ್ ಹಾಗೂ ಹಿಟಿರೋ ಲ್ಯಾಬ್ಸ್ ಎಂಎಸ್ಸಿ ಹಾಗೂ ಬಿಎಸ್ಸಿ ಪದವೀಧರರಿಗೆ ಉದ್ಯೋಗ ಕಲ್ಪಿಸಲಿವೆ. 
    • ಸನ್ಸೆರಾ ಇಂಜಿನಿಯರಿAಗ್ ಲಿಮಿಟೆಡ್., ಏರೋಸ್ಪೇಸ್ ಡಿವಿಶನ್, ಸೆರಾಟಿಜಿಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮೆಷಿನರಿ ಪ್ರೈ ಲಿಮಿಟೆಡ್, ವೋಲ್ವೋ ಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಸುಂದರA ಆಟೋ ಕಾಂಪೊನೆAಟ್ಸ್ ಲಿಮಿಟೆಡ್, ಹಿಮಾಲಯ ವೆಲ್ನೆಸ್, ಮಾಂಡೋವಿ ಮೋಟಾರ್ಸ್, ಪ್ರಥಮ್ ಮೋಟಾರ್ಸ್, ಅರವಿಂದ್ ಮೋಟಾರ್ಸ್, ಸುಪ್ರೀಮ್ ಆಟೋ ಮತ್ತು ಇನ್ನೂ ಅನೇಕ ಕಂಪೆನಿಗಳು ಐಟಿಐ ಹಾಗೂ ಡಿಪ್ಲೊಮೋ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಿವೆ. 
    • ನರ್ಸಿಂಗ್ ಪದವೀಧರ ಅಭ್ಯರ್ಥಿಗಳಿಗೆ ಪ್ರಮುಖ ಆಸ್ಪತ್ರೆಗಳಾದ ಹಿರಾನಂದನಿ ಆಸ್ಪತ್ರೆ, ಮುಂಬೈಯ ಅಪೊಲೊ ಆಸ್ಪತ್ರೆ,  ಕೆಎಂಸಿ ಆಸ್ಪತ್ರೆ ಹಾಗೂ ಇನ್ನಿತರ ವೈದ್ಯಕೀಯ ಸಂಸ್ಥೆಗಳು ಉದ್ಯೋಗ ನೀಡಲಿವೆ. 

    ವಿಶೇಷ ಸೂಚನೆ:

    ➢ ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜೂನ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಐಟಿಐ, ಡಿಪ್ಲೋಮಾ ಹಿನ್ನಲೆಯವರಿಗೆ ಆಳ್ವಾಸ್‌ನಿಂದ ಬಸ್ಸಿನ ವ್ಯವಸ್ಥೆ ಒದಗಿಸಲಾಗುವುದು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
    9008907716, 9663190590, 7975223865, 9741440490

    ಅಭ್ಯರ್ಥಿಗಳ ನೊಂದಾವಣೆ ಹಾಗೂ ಉದ್ಯೋಗ ನೀಡಲಿರುವ ಕಂಪೆನಿಗಳ ಮಾಹಿತಿಗೆ: www.alvaspragati.com
    ಕಂಪೆನಿಗಳ ನೊಂದಾವಣೆ ಹಾಗೂ ಇತರ ಮಾಹಿತಿಗೆ: 8971250414

    ಅಭ್ಯರ್ಥಿಗಳು ಲಗತ್ತಿಸಬೇಕಾದ ಅಗತ್ಯ ದಾಖಲಾತಿಗಳು: 
    ➢ 5-10 ಪಾಸ್‌ಪೋರ್ಟ್ ಭಾವಚಿತ್ರಗಳು
    ➢ ಸಂಪೂರ್ಣ  ಶೈಕ್ಷಣಿಕ ಮಾಹಿತಿಗಳನ್ನೊಳಗೊಂಡ ರೆಸ್ಯೂಮೆ
    ➢ ಅಂಕ ಪಟ್ಟಿಗಳು (ನೆರಳಚ್ಚು ಪ್ರತಿಗಳು) (ಘಿಇಖಔಘಿ)
    ➢ ಆನ್‌ಲೈನ್ ರಿಜಿಸ್ಟೆçÃಶನ್ ನಂಬರ್/ಐಡಿ
    ➢ ಅಭ್ಯರ್ಥಿಗಳು ಉದ್ಯೋಗ ಮೇಳದಂದು ಬೆಳಿಗ್ಗೆ 8 ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಹಾಜರಿರಬೇಕು

    ಪತ್ರಿಕಾ ಗೋಷ್ಠಿಯಲ್ಲಿ ಆಳ್ವಾಸ್ ಪ್ರಗತಿ ಐಟಿಇಎಸ್ ಸೆಕ್ಟರ್ ಹೆಡ್ ಡಾ. ಗುರುಪ್ರಸಾದ್ ಪೈ ಬಿ. ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ
    • ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ
    • ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ
    • ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ
    • ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.