ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಜನ್ನಾಲ್‌ನ ಶಂಕರ ಪೂಜಾರಿ ಅವರ ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10,000 ರೂಪಾಯಿಯನ್ನು ಚೆಕ್ ಮೂಲಕ ಹಸ್ತಾಂತರಿಸಲಾಯಿತು.
ಶಂಕರ ಪೂಜಾರಿ ಮಗಳಾದ ಶ್ರೀರಕ್ಷಾ ಇವರಿಗೆ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ. ಬಿ.ಬಿ ಹೆಗ್ಡೆ.ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.