ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವದ ಪ್ರಯುಕ್ತ ಲಾಂಛನ ಬಿಡುಗಡೆ ಸಮಾರಂಭ ಕುಂಭಾಶಿಯ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ದೇವರಾಯ ಎಂ.ಶೇರುಗಾರ್ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ ಮಾಡಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಗಣೇಶ ಕಿಣಿ ಬೆಳ್ವೆ, ಸಮಿತಿಯ ಹಿರಿಯ ಸದಸ್ಯ ಡಾ| ಕಾಶೀನಾಥ ಪೈ, ಬೆಣ್ಗೆರೆ ಶ್ರೀ ನಾಗದೇವಸ್ಥಾನದ ಕಾರ್ಯದರ್ಶಿ ಗುರುರಾಜ್ ಮೇಸ್ತ, ಗುಜ್ಜಾಡಿ-ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಅಧ್ಯಕ್ಷ ರಘುರಾಮ ಟಿ., ಚಂದ್ರ ಖಾರ್ವಿ, ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಸಮಿತಿಯ ಗೌರವಾಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಸ್ವಾಗತಿಸಿದರು. ಪುರೋಹಿತರಾದ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ವೇದಘೋಷ ಹಾಡಿದರು. ಅನಿತಾ ನಾಗರಾಜ ಶೇಟ್ ಪ್ರಾರ್ಥನೆ ಹಾಡಿದರು. ಸಮಿತಿ ಅಧ್ಯಕ್ಷ ಸತೀಶ್ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಘುವೀರ ಕೆ., ನಾರಾಯಣ ಪೂಜಾರಿ, ರಾಜ್‌ಗೋಪಾಲ ಶೇರುಗಾರ್, ಗೋಪಾಲ ಖಾರ್ವಿ ದಾವನಮನೆ, ಅರುಣ್ ಕುಮಾರ್, ಸಂದೀಪ ಖಾರ್ವಿ, ಬಿ.ಪ್ರಕಾಶ ಶೆಣೈ ಅತಿಥಿಗಳನ್ನು ಗೌರವಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು.