ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ವಾಹನ ಕೊಡುಗೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
  ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ವತಿಯಿಂದ ದತ್ತು ಸ್ವೀಕಾರ ಪಡೆದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು.

Call us

Click Here

ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಅವರು ವಾಹನ ಹಸ್ತಾಂತರಿಸಿ ಮಾತನಾಡಿ, ಸರಕಾರಿ ಉಳಿವಿಗೆ ಹಳೆ ವಿದ್ಯಾರ್ಥಿಗಳ ಹಾಗೂ ಊರಿನ ನಾಗರಿಕರ ಸಹಕಾರ ಅಗತ್ಯವಿದೆ. ನಮ್ಮೂರಿನ ಶಾಲೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲು ಯೋಜನೆ ರೂಪಿಸಿಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ವಿದ್ಯಾರ್ಥಿಗಳಿಗೆ ಉಚಿತ‌ ನೋಟ್ ಪುಸ್ತಕ, ಸಮವಸ್ತ್ರ, ಇಂಗ್ಲೀಷ್ ಮಾಧ್ಯಮದ ಪಠ್ಯ ಪುಸ್ತಕಗಳನ್ನು ನೀಡಲಾಗುವುದು. ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡಲಾಗಿದ್ದು ಉತ್ತಮ ನುರಿತ ಶಿಕ್ಷಕರನ್ನು ನೇಮಿಸಲಾಗಿದೆ ಇದರ ಸದುಪಯೋಗಪಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶಾರದಾ ದೇವಾಡಿಗ, ಬಿಜೂರು ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ವಿ. ದೇವಾಡಿಗ, ಗ್ರಾ.ಪಂ ಸದಸ್ಯ ರಾಜೇಂದ್ರ ಬಿಜೂರು, ಜಯರಾಮ ಶೆಟ್ಟಿ ಬಿಜೂರು, ಅಲಕ್ ಬಿಜೂರು, ನಾಗರಾಜ ಪಿ. ಯಡ್ತರೆ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಕೃಷ್ಣ ದೇವಾಡಿಗ, ಹಳೆ ವಿದ್ಯಾರ್ಥಿ ಸಂಘದ ಸಾಂಸ್ಕ್ರತಿಕ ಕಾರ್ಯದರ್ಶಿ ನಂದೀಶ ದೇವಾಡಿಗ, ಉಮೇಶ ಮೊಗವೀರ, ಚಾಲಕ ನವೀನ್, ಮುಖ್ಯಶಿಕ್ಷಕ ಮಂಜುನಾಥ ಎಸ್. ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ಎಸ್. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಮನೋರಮಾ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Click here

Click here

Click here

Click Here

Call us

Call us

Leave a Reply