ಬಾಲಕನ ಮೇಲೆ ಹಲ್ಲೆ ನಡೆಸಿದ ನಾಲ್ವರ ಬಂಧನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬಾಲಕನ ಮೇಲೆ ದೂರದ ಸಂಬಂಧಿಗಳಾದ ನಾಲ್ವರು ಹಲ್ಲೆ ನಡೆಸಿದ ಘಟನೆಯ ವೀಡಿಯೊ ವೈರಲ್ ಆಗಿದ್ದು ಮೇ.28ರಂದು ರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Call us

Click Here

ಹಣಕಾಸು ವಿಚಾರದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು ಪ್ರಕರಣದ ಹಿನ್ನೆಲೆಯಲ್ಲಿ ಸಿನಾನ್, ರಿಝ್ವಾನ್, ಅಬಾನ್, ತೌಹೀದ್ ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹಲ್ಲೆಯ ವೀಡಿಯೊ ವೈರಲ್ ಆದ ಬೆನ್ನಲ್ಲೇ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ 29ರಂದು ಎಫ್‌ಐಆರ್ ದಾಖಲಾಗಿತ್ತು. ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತ ಅಪ್ರಾಪ್ತ ವಯಸ್ಸಿನವನಾಗಿರುವುದರಿಂದ, ವೀಡಿಯೊವನ್ನು ಪ್ರಸಾರ ಮಾಡುವುದು ಅಪರಾಧವೇ ಅಥವಾ ಇಲ್ಲವೇ ಎಂದು ಕಾನೂನು ಅಭಿಪ್ರಾಯವನ್ನು ಪಡೆದು ವೀಡಿಯೊವನ್ನು ಪ್ರಸಾರ ಮಾಡುವವರ ಮೇಲೆ ಮುಂದಿನ ಕ್ರಮವನ್ನು ನಿರ್ಧರಿಸಲಾಗುತ್ತದೆ.

Leave a Reply