ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್‌ನ  ವಿದ್ಯಾರ್ಥಿಗಳು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 10 ರ‍್ಯಾಂಕ್‌ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ.

Call us

Click Here

ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 21ನೇ ರ‍್ಯಾಂಕ್‌, ಬಿ.ಎನ್.ವೈ.ಎಸ್. ವಿಭಾಗದಲ್ಲಿ 24ನೇ ರ‍್ಯಾಂಕ್‌, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 33 ನೇ ರ‍್ಯಾಂಕ್‌, ಪಶು ವೈದ್ಯಕೀಯ ವಿಭಾಗದಲ್ಲಿ 33ನೇ ರ‍್ಯಾಂಕ್‌, B-ಫಾರ್ಮ್ ಮತ್ತು D-ಫಾರ್ಮ್ ವಿಭಾಗಗಳಲ್ಲಿ 49 ನೇ ರ‍್ಯಾಂಕ್‌ ಗಳಿಸಿದ್ದಾರೆ.

ವಿದ್ಯಾರ್ಥಿ ಶರತ್ ಹೆಚ್. ಪಿ. ಪಶು ವೈದ್ಯಕೀಯ ವಿಭಾಗದಲ್ಲಿ 26 ನೇ ರ‍್ಯಾಂಕ್‌, ಕೃಷಿ ವಿಜ್ಞಾನ ವಿಭಾಗದಲ್ಲಿ 37 ನೇ ರ‍್ಯಾಂಕ್‌ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ. ಕಾರ್ತಿಕ್ ಎ. ಎಸ್. ಕೃಷಿ ವಿಜ್ಞಾನ ವಿಭಾಗದಲ್ಲಿ 62ನೇ ರ‍್ಯಾಂಕ್‌, ಅಭಿನವ್ ಹೆಚ್. ಬಿ. ಪಶು ವೈದ್ಯಕೀಯ ವಿಭಾಗದಲ್ಲಿ 74 ನೇ ರ‍್ಯಾಂಕ್‌ ಪಡೆದಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 122 ವಿದ್ಯಾರ್ಥಿಗಳು 1000 ರ‍್ಯಾಂಕ್‌ನೊಳಗೆ 122   ಮತ್ತು  210 ವಿದ್ಯಾರ್ಥಿಗಳು 2000 ರೊಳಗೆ ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ.

ಕಾಲೇಜು ಪ್ರಾರಂಭದಿಂದಲೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.

Click here

Click here

Click here

Click Here

Call us

Call us

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ  ಹಾಗೂ ಉಪನ್ಯಾಸಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply