Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಜೀಂ ಪ್ರೇಮ್‍ಜಿ ವಿ.ವಿಯಿಂದ  ಸಾಹಿತ್ಯ ಸಹವಾಸ  ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
    ಉಡುಪಿ ಜಿಲ್ಲೆ

    ಅಜೀಂ ಪ್ರೇಮ್‍ಜಿ ವಿ.ವಿಯಿಂದ  ಸಾಹಿತ್ಯ ಸಹವಾಸ  ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯ ವತಿಯಿಂದ ಇಲ್ಲಿನ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ‘ಸಾಹಿತ್ಯ ಸಹವಾಸ’ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    Click Here

    Call us

    Click Here

    ವಿಡಿಯೊ ಸರಣಿಯನ್ನು ಬಿಡುಗಡೆ ಮಾಡಿದ ನಾಡಿನ ಹಿರಿಯ ಸಾಹಿತಿ ಮತ್ತು ಚಿಂತಕ ಲಕ್ಷ್ಮೀಶ ತೋಳ್ಪಾಡಿಯವರು ಮಾತನಾಡಿ “ಮನಸ್ಸು ಮುಟ್ಟಬಹುದಾದ ಸೂಕ್ಷ್ಮಾತಿಸೂಕ್ಷ್ಮವಾದ ಲಹರಿಗಳನ್ನು, ಅಸ್ತಿತ್ವದ ಬಿಂದುಗಳನ್ನು ಈ ನೆಲದ ಮೂವರು ಮಹನೀಯರಾದ ಕಾರಂತರು, ಅನಂತಮೂರ್ತಿ ಮತ್ತು ಅಡಿಗರು ಮುಟ್ಟಿದವರು. ಅಡಿಗರು ಸಿದ್ಧಶೈಲಿಯಿಂದ ಹೊರಟು ಹೊಸಹುಟ್ಟು ಅಥವಾ ತಾವು ಪಡೆಯಬೇಕಾದ ನಾವೀನ್ಯತೆಯ ಅನುಕೂಲದ  ಅನಿವಾರ್ಯತೆಯನ್ನು  ತೋರಿಸಿಕೊಟ್ಟವರು ಎಂದು ಬಣ್ಣಿಸಿದರು.

    ಕಾರಂತರದು ಸ್ವಯಂಕೃತ ವ್ಯಕ್ತಿತ್ವ. ತಮ್ಮದಾರಿ ಮತ್ತು ಅಭಿವ್ಯಕ್ತಿಯನ್ನು ತಾನೇ ಕಂಡುಕೊಂಡವರು. ಅದೊಂದು ಚಾರಿತ್ರಿಕ ಸ್ಥಿತಿಯಷ್ಟೇ ಅಲ್ಲ, ಅದಕ್ಕೆ ಅವರ ವ್ಯಕ್ತಿತ್ವದ ಪ್ರಯೋಗಶೀಲತೆಯೂ ಕಾರಣ.  ಅವರದು ಲಿಪಿಬದ್ಧ ಸಂಪ್ರದಾಯ ಕಡಿಮೆ. ಮೌಖಿಕ ಸಂಪ್ರದಾಯವೇ ಹೆಚ್ಚು. ವೇಗ, ತಾತ್ಕ್ಷಣಿತ ಪ್ರವೃತ್ತಿ ಅವರಲ್ಲಿ ಎದ್ದು ಕಾಣುವ ಗುಣಗಳು. ಅವರದು ಕಾಯುವಿಕೆಗೆ ಒಗ್ಗದ  ಅಸಲು ಕಸುಬು. ಶಾಸ್ತ್ರಕ್ಕಿಂತ ಅವರಿಗೆ ಮನೋಧರ್ಮ ಪ್ರಧಾನವಾಗಿರುವ ಭಾವ ಮುಖ್ಯ ಎಂದು ಹೇಳಿದರು.

    ಜ್ಞಾನಪೀಠ ಪ್ರಶಸ್ತಿ ವಿಜೇತ ದಿ. ಯು.ಆರ್.ಅನಂತಮೂರ್ತಿಯವರು ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಶಿವರಾಮ ಕಾರಂತ, ನವ್ಯ ಸಾಹಿತ್ಯ, ಮತ್ತು ನವ್ಯ ಸಾಹಿತ್ಯದ ಹರಿಕಾರ ಗೋಪಾಲಕೃಷ್ಣ ಅಡಿಗರ ಕುರಿತು ನೀಡಿರುವ ಉಪನ್ಯಾಸಗಳನ್ನು ಇಂಗ್ಲಿಷ್ ಉಪಶೀರ್ಷಿಕೆಗಳೊಂದಿಗೆ ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಯೂಟ್ಯೂಬ್ ವಾಹಿನಿಯ ಮೂಲಕ ಬಿಡುಗಡೆ ಮಾಡಲಾಯಿತು. ಮುಂದಿನ ದಿನಗಳಲ್ಲಿ ಈ ವಿದ್ವತ್ಪೂರ್ಣ ಉಪನ್ಯಾಸಗಳು ಪಾಡ್ಕಾಸ್ಟ್ ರೂಪದಲ್ಲಿಯೂ ಎಲ್ಲ ಆಸಕ್ತರಿಗೆ ಲಭ್ಯವಾಗಲಿವೆ.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿವಿ ಕುಲಪತಿ ಫೆಂರ. ಶರತ್ ಅನಂತಮೂರ್ತಿ ಅವರು ತಮ್ಮ ತಂದೆಯವರ ನೆನಪುಗಳು ಹಾಗೂ ಅವರ ಸಾಹಿತ್ಯದ ಕೆಲಸಗಳು, ಸಾಹಿತಿಗಳ ಸಂಪರ್ಕವನ್ನು ಸ್ಮರಿಸಿಕೊಂಡರು.

    ಇಂದಿನ ಸಂದರ್ಭದಲ್ಲಿ ಅಂತಹ ಆರೋಗ್ಯಕರ ಚರ್ಚೆಯ ವಾತಾವರಣ ಕಾಣದಿರುವುದರ ಬಗ್ಗೆ ವಿಷಾದಿಸಿದರು. ಸಾಹಿತ್ಯ ವಿಮರ್ಶೆ ಇನ್ನಷ್ಟು ಗಂಭೀರವಾಗಿ ನಡೆಯಬೆಕಾದ ಅಗತ್ಯವನ್ನು ತಿಳಿಸಿದರು. ವಿಶೇಷವಾಗಿ ಅಡಿಗರ ಪ್ರಸಿದ್ಧ ಕವಿತೆ ‘ ರಾಮನವಮಿಯ ದಿವಸ’ ವನ್ನು ಓದಿ  ಪದ್ಯ ಬರೆವ ಬಗೆಯ ಕುರಿತು ಗಂಭೀರ ಚರ್ಚೆ ನಡೆಸಿದ್ದನ್ನು ನಿರೂಪಿಸಿದರು.

    ತಂದೆಯವರ ಸೃಜನಾತ್ಮಕ ಪ್ರಕ್ರಿಯೆಯೇ ಅವರ ಮಾತಾಗಿತ್ತು. ಮಾತಾಡುತ್ತ ಆಡುತ್ತ ಅವರ ಚಿಂತನಶೀಲತೆ ಹುರಿಗಟ್ಟುತ್ತಿತ್ತು. ಅದಕ್ಕಾಗಿ ಅವರಿಗೆ ಜನಸಂಪರ್ಕದ ಅಗತ್ಯವಿತ್ತು. ಮಾತಿನ ಮೂಲಕವೇ ಅವರ  ಹೊಸ ಯೋಚನೆಗಳು ರೂಪುತಳೆಯುತ್ತಿದ್ದವು ಎಂದು ತಿಳಿಸಿದರು.

    ಕಾರಂತ ಮತ್ತು ಅಡಿಗರ ಜೀವನವನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದ ಎಸ್ತರ್ ಅನಂತಮೂರ್ತಿ ಮತ್ತು ಕ್ಷಮಾ ರಾವ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಕಾರಂತರ ಬಗೆಗಿನ ಅನಂತಮೂರ್ತಿಯವರ ಬಗೆಗಿನ ಉಪನ್ಯಾಸಕ್ಕೆ ಪ್ರತಿಸ್ಪಂದಿಸಿದ ಜಾನಪದ ವಿವಿ ವಿಶ್ರಾಂತ ಕುಲಪತಿ ಫೆಂರ. ಕೆ. ಚಿನ್ನಪ್ಪ ಗೌಡ, ಮಾತನಾಡಿ, “ಕನ್ನಡದ ಮನಸ್ಸುಗಳನ್ನು ಕಟ್ಟುವ ಕೆಲಸವನ್ನು ತಮ್ಮ ಜೀವಮಾನದುದ್ದಕ್ಕೂ ಕಾರಂತರು ಮಾಡಿದವರು. ಒಂದು ಲಕ್ಷಪುಟಗಳಷ್ಟು ವಿಸ್ತಾರವಾದ, ನಾನೂರಕ್ಕೂ ಮಿಕ್ಕಿದ ಕೃತಿಗಳಷ್ಟು ವಿಫುಲವಾದ ಬರೆವಣಿಗೆ ಅವರದು. ಅವರನ್ನು ನೆನಪಿಸಿಕೊಂಡಾಗಲೆಲ್ಲ ನನಗೆ ಎದ್ದು ಕಾಣುವುದು ಅವರ ಸಿಟ್ಟು. ಅನಂತಮೂರ್ತಿಯವರು ಕಾರಂತರ ಕುರಿತು ಮಾತಾಡುತ್ತ ಅವರು ದಕ್ಷಿಣ ಕನ್ನಡ ಜಿಲ್ಲೆಯ ಭೂತ ಇದ್ದಂತೆ ಎಂದು ಹೇಳಿದ್ದು ನನ್ನನ್ನು ವಿಶೇಷವಾಗಿ ಸೆಳೆದಿದೆ ಎಂದು ಹೇಳಿದರು.
     
    ಅಡಿಗರ ಬಗೆಗಿನ ಅನಂತಮೂರ್ತಿಯವರ ಬಗೆಗಿನ ಉಪನ್ಯಾಸಕ್ಕೆ ಕರ್ನಾಟಕ ಕೇಂದ್ರೀಯ ವಿವಿ ಕನ್ನಡ ವಿಭಾಗ ಮುಖ್ಯಸ್ಥ ಫೆಂರ, ವಿಕ್ರಮ್ ವಿಸಾಜಿ ಮಾತನಾಡಿದರು.

    ಕಾರಂತರ ಸಾಹಿತ್ಯ ಸೃಷ್ಟಿಯ ಕುರಿತ ವಿದ್ವತ್ ಗೋಷ್ಠಿಯಲ್ಲಿ ಹೆಸರಾಂತ ವಿಮರ್ಶಕರಾದ ಡಾ. ಟಿ. ಪಿ. ಅಶೋಕ, ಚಲನಚಿತ್ರ ನಿರ್ದೇಶಕರಾದ ಪಿ. ಶೇಷಾದ್ರಿ, ಬೆಂಗಳೂರಿನ ಎನ್‍ಎಂಕೆಆರ್‍ವಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸಂಧ್ಯಾ ಹೆಗಡೆ ದೊಡ್ಡಹೊಂಡ ಭಾಗವಹಿಸಿದ್ದರು.  ಪ್ರಾಧ್ಯಾಪಕಿ ಡಾ. ತಾರಿಣಿ ಶುಭದಾಯಿನಿ ಅಡಿಗರ ಕಾವ್ಯದ ಬಗ್ಗೆ ಮಾತನಾಡಿದರು. ಅಜೀಂ ಪ್ರೇಮ್‍ಜಿ ಫೌಂಡೇಷನ್ ನ ಮುಖ್ಯ ಸಂವಹನಾಧಿಕಾರಿ ಸುಧೀಶ್ ವೆಂಕಟೇಶ್ ಸ್ವಾಗತ ಕೋರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಅಡಿಗರ ಕಾವ್ಯವಾಚನ, ಕಾರಂತರು ಮತ್ತು ಅಡಿಗರೊಂದಿಗಿನ ಒಡನಾಟದ ನೆನಪುಗಳ ಹಂಚಿಕೆ, ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ತಂದವು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಮತ್ತು ಅಡಿಗರ ಗೀತೆಗಳ ಗಾಯನ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನೂ ವಿತರಿಸಲಾಯಿತು.

    ಹಿರಿಯ ಒಡಿಸ್ಸಿ ನೃತ್ಯ ಕಲಾವಿದೆ ಮತ್ತು ಶಿವರಾಮ ಕಾರಂತರ ಮಗಳಾದ ಕ್ಷಮಾ ರಾವ್, ಅಜೀಂ ಪ್ರೇಮ್‍ಜಿ ಫೌಂಡೇಷನ್‍ನ ಉಮಾಶಂಕರ್ ಪೆರಿಯೋಡಿ, ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಕನ್ನಡ ಉಪಕ್ರಮದ ಸಹನಿರ್ದೇಶಕರಾದ ಎಸ್.ವಿ.ಮಂಜುನಾಥ್, ಡಯಟ್ ಉಡುಪಿಯ ಹಿರಿಯ ಉಪನ್ಯಾಸಕರಾದ ಡಾ. ಅಶೋಕ್ ಕಾಮತ್, ಪೂರ್ಣಪ್ರಜ್ಞ ಸೆಂಟರ್ ಫಾರ್ ರಿಸರ್ಚ್ ಅಂಡ್ ಡೆವಲಪ್‍ಮೆಂಟ್‍ನ ನಿರ್ದೇಶಕರಾದ ಡಾ. ಕೃಷ್ಣ ಕೊತ್ತಾಯರವರು ಉಪಸ್ಥಿತರಿದ್ದರು.

    ಪ್ರಬಂಧ ಸ್ಪರ್ಧೆಯಲ್ಲಿ ಸುಶ್ಮಿತಾ, ಅಶ್ವಿನಿ. ಡಿ. ಎಸ್ ಹಾಗೂ ಮುಶೀನಾ ಬಾನು ಮೊದಲ ಮೂರು ಬಹುಮಾನ ಪಡೆದರು. ಗಾಯನ ಸ್ಪರ್ಧೆಯಲ್ಲಿ ಚಿನ್ಮಯಿ ರಾವ್, ಪ್ರಣದ್ ರಾವ್ ಹಾಗೂ ಅಕ್ಷರ ಬಹುಮಾನ ಗಳಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    17/12/2025

    ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    17/12/2025

    ಕಟಪಾಡಿ ಓವರ್ ಪಾಸ್ ಕಾಮಗಾರಿ ಹಿನ್ನೆಲೆ, ವಾಹನಗಳ ಸುಗಮ ಸಂಚಾರಕ್ಕೆ ಮಾರ್ಗ ಕಲ್ಪಿಸಿ: ಜಿಲ್ಲಾಧಿಕಾರಿ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.