ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಭರ್ಜರಿ ಗೆಲುವು

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 2,19,695 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

Call us

Click Here

ಕೋಟ ಶ್ರೀನಿವಾಸ ಪೂಜಾರಿ ಅವರು, 7,32,234  ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ಅವರು 4,70,215 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು 2,59,175 ಮತಗಳ ಮುನ್ನಡೆ ಸಾಧಿದ್ದಾರೆ. ಜೊತೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 11,269  ರಷ್ಟು ಮತಗಳು ನೋಟಾ ಬಂದಿವೆ.

ಕೋಟ ಶ್ರೀನಿವಾಸ ಪೂಜಾರಿ ಅವರು ಈ ವೇಳೆ ಪ್ರತಿಕ್ರಿಯಿಸಿ ನಾಯಕರು, ಕಾರ್ಯಕರ್ತರು ಹಾಗೂ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಗೆಲುವಿನ ನಗೆ ಬೀರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಮತ್ತೆ ಬಿಜೆಪಿ ತೆಕ್ಕೆಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ:
ಕಳೆದ ಬಾರಿ ಮೈತ್ರಿಯಡಿ ಜೆಡಿಎಸ್‌ಗೆ ಈ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಕಾಂಗ್ರೆಸ್ ಈ ಬಾರಿ ತನ್ನ ಗತವೈಭವಕ್ಕೆ ಮರಳಲು ಕೆ ಜಯಪ್ರಕಾಶ್‌ ಹೆಗ್ಡೆ ಮೇಲೆ ಭಾರ ಹಾಕಿತ್ತು. ಚಿಕ್ಕಮಗಳೂರು ಭಾಗದಲ್ಲಿ ಕಾಂಗ್ರೆಸ್ ಶಾಸಕರು ಇರುವುದು, ಗ್ಯಾರಂಟಿಗಳು ಕೈಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿ ಕೈ ಪಾಳಯ ಇತ್ತು. ಆದರೆ ಇದು ವಿಫಲವಾಗಿದೆ. ಅತ್ತ ಪ್ರಭಾವಿ, ಸಜ್ಜನ ರಾಜಕಾರಣಿ ಎಂದೇ ಹೆಸರಾದ ಕೋಟ ಶ್ರೀನಿವಾಸ ಪೂಜಾರಿಯನ್ನು ಕಣಕ್ಕಿಳಿಸಿ ಕ್ಷೇತ್ರ ಉಳಿಸಿಕೊಳ್ಳುವ ಉಮೇದಿನಲ್ಲಿದ್ದ ಬಿಜೆಪಿ ಇದರಲ್ಲಿ ಯಶಸ್ವಿಯಾಗಿದೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ರಾಜ್ಯದಲ್ಲಿ ಮೊದಲ ಹಂತದ (ದೇಶದಲ್ಲಿ ಎರಡನೇ ಹಂತ) ಮತದಾನದ ವೇಳೆ, ಅಂದರೆ ಏಪ್ರಿಲ್‌ 26ರಂದು ಮತದಾನ ನಡೆದಿತ್ತು. ಕ್ಷೇತ್ರದಲ್ಲಿ 15,85,162 ಮತದಾರರಿದ್ದು, ಇದರಲ್ಲಿ ಈ ಬಾರಿ 12,22,888 ಜನರು ತಮ್ಮ ಹಕ್ಕು ಚಲಾಯಿಸಿದ್ದರು. ಈ ಮೂಲಕ ಇಲ್ಲಿ ಶೇ. 77.15 ರಷ್ಟು ಮತದಾನ ನಡೆದಿತ್ತು.

Click here

Click here

Click here

Click Here

Call us

Call us

ಒಂದು ಕಾಲದಲ್ಲಿ ಉಡುಪಿ ಎಂದಾಗಿದ್ದ ಈ ಕ್ಷೇತ್ರವನ್ನು ಕಾಂಗ್ರೆಸ್‌ನ ಪ್ರಭಾವಿ ಮುಖಂಡ ಆಸ್ಕರ್ ಫರ್ನಾಂಡೀಸ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಬ್ಯಾಂಕಿಂಗ್ ಕ್ಷೇತ್ರದ ದಿಗ್ಗಜ ಟಿಎ ಪೈ ಮೊದಲಾದ ನಾಯಕರು ಪ್ರತಿನಿಧಿಸಿದ್ದರು. 2019ರಲ್ಲಿ ಹಾಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಲ್ಲಿಂದ ಗೆದ್ದಿದ್ದರು. ಇನ್ನು ಚಿಕ್ಕಮಗಳೂರು ಕ್ಷೇತ್ರವಂತೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಗೆಲ್ಲಿಸಿದ ಖ್ಯಾತಿಯನ್ನೇ ಹೊಂದಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್‌ ಬಿಜೆಪಿ ಸಮಬಲ
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ (ಎಸ್ ಸಿ ಮೀಸಲು), ಚಿಕ್ಕಮಗಳೂರು ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರಗಳಿವೆ, ಉಡುಪಿ ಕ್ಷೇತ್ರದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೆ, ಚಿಕ್ಕಮಗಳೂರಿನ ಎಲ್ಲಾ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿರುವುದು ವಿಶೇಷ.

2009ರಿಂದ ಈವರೆಗೆ ಇಲ್ಲಿ ನಡೆದಿರುವ 4 ಚುನಾವಣೆಗಳಲ್ಲಿ 3 ಬಾರಿ ಬಿಜೆಪಿ ಮತ್ತು 1 ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 2009ರ ಚುನಾವಣೆಯಲ್ಲಿ ದಕ್ಷಿಣ ಕನ್ನಡದಿಂದ ಇಲ್ಲಿಗೆ ಬಂದಿದ್ದ ಮಾಜಿ ಸಿಎಂ ಬಿಜೆಪಿ ಡಿವಿ ಸದಾನಂದ ಗೌಡ ಅವರು ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ದೆ ಅವರ ವಿರುದ್ಧ ಅಲ್ಪ ಮತಗಳ ಗೆಲುವು ಸಾಧಿಸಿದ್ದರು.

ಮುಂದೆ ಸದಾನಂದ ಗೌಡರು ಸಿಎಂ ಆದಾಗ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ನಡೆದ ಉಪಚುನಾವಣೆಯಲ್ಲಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಬಿಜೆಪಿಯ ವಿ ಸುನಿಲ್ ಕುಮಾರ್ ಅವರ ವಿರುದ್ಧ 45,724 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

2014ರಲ್ಲಿ ಮೊದಲ ಬಾರಿ ಕಣಕ್ಕಿಳಿದ ಶೋಭಾ ಕರಂದ್ಲಾಜೆ ಇದೇ ಜಯಪ್ರಕಾಶ್ ಹೆಗ್ಡೆ ಅವರ ವಿರುದ್ಧ 1,81,643 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದರು. ಮುಂದೆ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೂ ಹೋದರು.

2019ರಲ್ಲಿ ಇಲ್ಲಿ ಶೋಭಾ ಕರಂದ್ಲಾಜೆ ಮತ್ತೊಮ್ಮೆ ಗೆಲುವು ಸಾಧಿಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌-ದಳ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಅವರು 3,49,599 ಮತಗಳ ಭಾರೀ ಅಂತರದಿಂದ ಸೋಲು ಕಂಡರು.

ಈ ವೇಳೆ ಶಾಸಕರಾದ ಯಶಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಲಾಲಾಜಿ ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋ‌ರ್ ಕುಮಾ‌ರ್ ಕುಂದಾಪುರ ಮೊದಲಾದವರು ಜೊತೆಗಿದ್ದರು.

Leave a Reply