ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಸ. ಪ.ಪೂ ಕಾಲೇಜು ಪ್ರೌಢ ಶಾಲಾ ವಿಭಾಗದಿಂದ 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 40 ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ರೋಟರಿ ನರಸಿಂಹ ಕಲಾಮಂದಿರದಲ್ಲಿ ಆಯೋಜಿಸಲಾಗಿತ್ತು.
614 ಅಂಕ ಪಡೆದ ಶಾಲೆಗೆ ಪ್ರಥಮ ಸ್ಥಾನ ಪಡೆದ ಅಕ್ಷತಾ ವಿ ಮತ್ತು ಆಂಗ್ಲ ಮಾಧ್ಯಮದಲ್ಲಿ 603 ಅಂಕ ಪಡೆದ ಕ್ಷಿಪಲಿ ಮತ್ತು ಕನ್ನಡ ಮಾದ್ಯಮದಲ್ಲಿ ಪ್ರಥಮ ಸ್ಥಾನ ಪಡೆದ ಎನ್ ವಿಶ್ವಾಸ್ ನಾಯಕ್ ಇವರಿಗೆ ಪೋಷಕರ ಸಮುಖದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ ಕುಮಾರ್, ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ ಕೆ. ಹಿರಿಯ ಸಹಶಿಕ್ಷಕಿ ವಿನುತಾ ಗಾಂವ್ಕರ್, ತರಗತಿ ಶಿಕ್ಷಕರಾದ ಶಾರದಾ ಮಯ್ಯ, ಶಂಕರನಾರಾಯಣ ಮಿತ್ಯಂತ, ಮತ್ತು ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.
ಬೋರ್ಡ್ ಹೈಸ್ಕೂಲ್‍ನ ಪರೀಕ್ಷೆ ಬರೆದ 154 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 40 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಪಡೆದಿದ್ದರು.
ಇಂಗ್ಲಿಷ್ ಶಿಕ್ಷಕ ಗಣೇಶ್ ಕಾಂಚಾನ್ ಕಾರ್ಯಕ್ರಮ ನಿರೂಪಿಸಿದರು.