ಪೋಕ್ಸೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳ ಬಂಧನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ, ಉದ್ಯಮಿ ಶ್ರೇಯಸ್ ನಾಯ್ಕ (25) ಎಂಬಾತನನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ.

Call us

Click Here

ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮೇ.18ರಂದು ದೂರು ದಾಖಲಾಗಿತ್ತು.

ಇದನ್ನೂ ಓದಿ ► ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – https://kundapraa.com/?p=72901 .

ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ. ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಲಾಗುತ್ತಿತ್ತು. ಅಂತಿಮವಾಗಿ ಸಿದ್ಧಾಪುರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ̤. ಆರೋಪಿಗೆ ಜು.21ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪಿ ವೈದ್ಯ ಡಾ. ರಾಬರ್ಟ್ ಬಂಧನ:
ಲೈಂಗಿಕ ದೌರ್ಜನ್ಯ, ಬೆದರಿಕೆ ಸೇರಿದಂತೆ ವಿವಿಧ ಆರೋಪಗಳನ್ನು ಎದುರಿಸುತ್ತಿರುವ, ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋ ಅವರನ್ನು ಶುಕ್ರವಾರ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.

Click here

Click here

Click here

Click Here

Call us

Call us

ಮುಂಬಯಿಯ ಐಷಾರಾಮಿ ರೆಸಾರ್ಟ್ ಒಂದರಲ್ಲಿ ಇದ್ದ ವೈದ್ಯರನ್ನು ತನಿಖೆಯ ಜಾಡು ಹಿಡಿದು ಹುಡುಕಿ ಪತ್ತೆ ಮಾಡಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾರೆ

ಕುಂದಾಪುರದ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆಗೆ ಡಾ. ರಾಬರ್ಟ್ ರೆಬೆಲ್ಲೋ ಕಳೆದ ಆರು ತಿಂಗಳಿನಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ಮಹಿಳಾ ವೈದ್ಯೆ 2023ರಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿಕೊಂಡಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಮೊಬೈಲ್ನಲ್ಲಿ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದರಂತೆ. ಜೊತೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.

ಕರ್ತವ್ಯದ ಸಮಯ ಮತ್ತು ಮುಗಿದ ಮೇಲೆ ರಾತ್ರಿ ಮೆಸೇಜ್ ಮಾಡುತ್ತಾರೆ. ವಿಡಿಯೋ ಕಾಲ್ ಮಾಡಿ ಎಂದು ಕಿರುಕುಳ ನೀಡುತ್ತಿದ್ದಾರೆ ಎನ್ನುವುದಾಗಿ ಮಹಿಳಾ ವೈದ್ಯೆ ದೂರು ದಾಖಲಿಸಿದ್ದಾರೆ ಹೀಗಾಗಿ ವೈದ್ಯನನ್ನು ಸರಕಾರ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದು ಆದೇಶಿಸಲಾಗಿತ್ತು.

ಇದನ್ನೂ ಓದಿ ► ಲೈಂಗಿಕ ದೌರ್ಜನ್ಯ ಆರೋಪಿ ವೈದ್ಯ ಡಾ. ರಾಬರ್ಟ್‌ಗೆ ಜಾಮೀನು ಮಂಜೂರು – https://kundapraa.com/?p=72898 .

Leave a Reply