ಜೆ.ಇ.ಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ  

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದೇಶದ ಪ್ರತಿಷ್ಠಿತ  ಐಐಟಿ, ಐಐಎಸ್‍ಟಿ,  ಐಐಎಸ್‍ಸಿ   ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ,  ಕೆ. ಧ್ರುವ ಭಂಡಾರ್ಕರ್, ಅರ್ಜುನ್ ಇ ನಾಯಕ್, ಕಾರ್ತಿಕ್ ಎ. ಎಸ್, ಶಮಿತ್ ಎನ್ ಉನ್ನತ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ.

Call us

Click Here

ಈ ಪೈಕಿ ಸಿದ್ದಾಂತ್ ಆರ್ ನಾಯ್ಕ್ 1565, ಸುಜಿತ್ ಡಿ ಕೆ  3648, ಅರ್ಜುನ್ ಇ ನಾಯಕ್ 3298, ಕೆ ಧ್ರುವ ಬಂಡಾರ್ಕರ್ 4260 ನೇ ಕೆಟಗರಿ ರ‍್ಯಾಂಕ್‌ ಗಳಿಸಿ ವಿಶೇಷ ಸಾಧನೆ ಗೈದಿದ್ದಾರೆ.

ಈ ಮೂಲಕ ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಪ್ರವೇಶಕ್ಕೆ ನಡೆಯುವ ಆಯ್ಕೆ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ. ಸಂಸ್ಥೆಯು ಆರಂಭದ ವರ್ಷಗಳಲ್ಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರು ವಾಸಿಯಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವರ್ಗದವರು, ಜೆ.ಇ.ಇ  ಅಡ್ವಾನ್ಸ್ಡ್‌ ಪರೀಕ್ಷೆಯ ಸಂಯೋಜಕರಾದ ತಿರುಮಲ ರೆಡ್ಡಿ ರವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

3 × 1 =