ಕುಂದಾಪುರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವು ನಾವುಂದದಲ್ಲಿ ಜೂನ್ 15ರಂದು ಬೆಳ್ಳಿಗೆ 10.30ಕ್ಕೆ ನಡೆಯಲಿದೆ.
ಕರ್ನಾಟಕ ರಾಜ್ಯಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರಾದ ಹಾಗೂ ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನವೀಕೃತ ಪ್ರಧಾನ ಕಛೇರಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ವಹಿಸಿಕೊಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ, ಉಡುಪಿಯ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ, ಎಂ ಮಹೇಶ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಎಚ್. ಹರಿಪ್ರಸಾದ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ದೇವಾಡಿಗ ಇನ್ನಿತರರು ಉಪಸ್ಥಿತರಿರುವವರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಧ್ಯಕ್ಷರಾದ ಎಸ್. ರಾಜು ಪೂಜಾರಿ, ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಆಳ್ವೆಗದ್ದೆ ಕೋರಿದ್ದಾರೆ.
ಅದೇ ದಿನ ಮಧ್ಯಾಹ್ನ 2.00 ಗಂಟೆಗೆ ಉಡುಪಿಯ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಅತಿಥಿ ಕಲಾವಿದರ ಕೊಡುವಡಕೆಯಿಂದ ದಿ. ಕಾಳಿಂಗ ನಾವುಡ ವಿರಚಿತ ನಾಗಶ್ರೀ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.















