Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ಹಲಸು, ಹಣ್ಣುಗಳು, ಆಹಾರೋತ್ಸವ, ಕೃಷಿ ಪರಿಕರ ಪ್ರದರ್ಶನ ಉದ್ಘಾಟನೆ
    alvas nudisiri

    ಆಳ್ವಾಸ್‌ನಲ್ಲಿ ಹಲಸು, ಹಣ್ಣುಗಳು, ಆಹಾರೋತ್ಸವ, ಕೃಷಿ ಪರಿಕರ ಪ್ರದರ್ಶನ ಉದ್ಘಾಟನೆ

    Updated:17/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದರೆ:
    ‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

    Click Here

    Call us

    Click Here

    ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಕೃಷಿ ಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ಎರಡನೇ ವರ್ಷದ ‘ಸಮೃದ್ಧಿ-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು.   

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ ಆಹಾರೋತ್ಸವ ಮಹಾಮೇಳ  ಸಮಿತಿ, ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಕೃಷಿ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ಮೇಳ ಹಮ್ಮಿಕೊಳ್ಳಲಾಗಿದ್ದು, ಜೂನ್ 14ರಿಂದ 16ರ ವರೆಗೆ ನಡೆಯಿತು.

    ನಮ್ಮದು ಕೃಷಿ ಮತ್ತು ಋಷಿ ಸಂಸ್ಕೃತಿಯ ದೇಶ. ಇವೆರಡೂ ತ್ಯಾಗ ಮತ್ತು ಆರಾಧನಾ ಸಂಸ್ಕೃತಿ. ತುಳುನಾಡಿನ ಸಂಸ್ಕೃತಿ ಕೃಷಿ ಮೂಲದ್ದು. ಕೃಷಿಯಿಂದ ಇಲ್ಲದೇ ಸಂಸ್ಕೃತಿ ಇಲ್ಲ ಎಂದರು.

    ಮಿಜಾರುಗುತ್ತು ಆನಂದ ಆಳ್ವ ಅವರು ಕೃಷಿಋಷಿ. ಕಂಬಳ ಹಾಗೂ ಕೃಷಿ ಪ್ರೋತ್ಸಾಹಿಸಿದ ಅವರು, ಉದ್ಯಮಶೀಲತೆಗೆ ಕಾಲಿಟ್ಟರು. ವರ್ಷಕ್ಕೊಮ್ಮೆ ಕೆಸರಿನಲ್ಲಿ ಒಂದು ದಿನ ಆಚರಣೆ ಮಾಡುವುದಲ್ಲ. ವರ್ಷ ಪೂರ್ತಿ ಕೃಷಿ ಜೊತೆಗಿರಬೇಕು. ಕರಾವಳಿಯಲ್ಲಿ ಒಂದು ಎಕರೆ ಕೃಷಿ ಭೂಮಿ ಇದ್ದರೆ, ವಾರ್ಷಿಕ ೧೫ ಲಕ್ಷ ಆದಾಯ ಪಡೆಯಲು ಸಾಧ್ಯ ಎಂದರು.

    Click here

    Click here

    Click here

    Call us

    Call us

    ಸರ್ಕಾರ ಮಾಡಬೇಕಾದ ಉನ್ನತ ಕಾರ್ಯಗಳನ್ನು ಡಾ.ಎಂ. ಮೋಹನ ಆಳ್ವ ಮಾಡುತ್ತಿದ್ದಾರೆ ಎಂದರು.

    ಶಾಸಕ ರಾಜೇಶ್ ನಾಯ್ಕ ಮಾತನಾಡಿ, ಕರಾವಳಿ ಹಾಗೂ ಮಲೆನಾಡಿನಲ್ಲಿ ಕೃಷಿ ನಷ್ಟದ ಕ್ಷೇತ್ರವಲ್ಲ. ಆದರೆ, ತಂತ್ರಜ್ಞಾನ- ಆಧುನಿಕ ವಿಧಾನಗಳನ್ನು ಬಳಸಿಕೊಂಡಾಗ ಫಲ ಪಡೆಯಲು ಸಾಧ್ಯ ಎಂದರು.

    ಎರಡು ತಿಂಗಳು ಕೃಷಿಯಲ್ಲಿ ದುಡಿದರೆ, ವರ್ಷಕ್ಕೆ ಬೇಕಾದ ಆಹಾರ ಪದಾರ್ಥಗಳನ್ನು ಪಡೆಯಬಹುದು. ಕೃಷಿ ಇಲ್ಲದೇ ಏನಿಲ್ಲ. ಆನಂದ ಆಳ್ವರು ಕೃಷಿಯಲ್ಲಿ ನಮಗೆಲ್ಲ ಪ್ರೇರಣೆ ಎಂದರು.

    ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಮಾತನಾಡಿ, ‘ಆಳ್ವರು ಆರಂಭಿಸುವ ಕಾರ್ಯಗಳು ಯಶಸ್ಸಿನ ಉತ್ತುಂಗ ತಲುಪುತ್ತವೆ. ಈ ಹಲಸು ಮೇಳವೂ ಅದೇ ರೀತಿ ಯಶಸ್ವಿ ಆಗುತ್ತಿದೆ ಎಂದರು. 

    ಹಲಸು ಹಸಿದ ಬಡವರ ತಿನಿಸು ಆಗಿತ್ತು. ಈಗ ಎಲ್ಲರಿಗೂ ಬೇಕಾದ ಆಹಾರವಾಗಿದೆ. ತುಳುನಾಡಿನಲ್ಲಿ ಬರ್ಕೆ ಮತ್ತು ತುಳುವೆ ಎಂಬ ಎರಡು ಜಾತಿಯ ಹಲಸಿದೆ ಎಂದರು.

    ನಮ್ಮ ಆಹಾರ ಸೇವನೆ ಮಾದರಿಯು ನಾವು ವೈದ್ಯರ ಬಳಿ ಹೋಗದಂತಿರಬೇಕು. ಅದಕ್ಕಾಗಿ ಒಂದು ಹೊತ್ತು ಆಹಾರ ಸೇವಿಸುವವ ಯೋಗಿ, ಎರಡು ಹೊತ್ತು ಭೋಗಿ, ಮೂರು ಹೊತ್ತು ರೋಗಿ, ನಾಲ್ಕು ಹೊತ್ತು ಸೇವಿಸಿದರೆ ಆಳ್ವಾಸ್ ಆಸ್ಪತ್ರೆಗೆ ಹೋಗಿ ಎಂದು ಚಟಾಕಿ ಹಾರಿಸಿದ ಅವರು, ಸರ್ವಜ್ಞ ಹೇಳಿದಂತೆ ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು ಎಂದರು.

    ಭಾರತದಲ್ಲಿ ೧೭ ಲಕ್ಷ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಕೃಷಿ ಮಾಡಲಾಗುತ್ತಿದ್ದು, ವಿಶ್ವದಲ್ಲಿಯೇ ಏಳನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದೆ. ಸರ್ಕಾರ ಹಡಿಲು ಭೂಮಿಯನ್ನು ಬಳಸಿಕೊಂಡು ಕೃಷಿ ತರಬೇತಿ ಕೇಂದ್ರ ಆರಂಭಿಸಬೇಕು. ಅಲ್ಲಿ ಯುವಜನತೆಗೆ ಉದ್ಯೋಗ ನೀಡಬೇಕು ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ,  ಯುವಶಕ್ತಿ ಕೇಂದ್ರೀಕೃತವಾಗಿ ನಾವು ಪರಿಸರ ಹಾಗೂ ದೇಶವನ್ನು ಮುಖ್ಯವಾಗಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸುವುದು ನಮ್ಮ ಕರ್ತವ್ಯ ಎಂದರು.

    ಶಿಸ್ತುಬದ್ಧ ಕಾರ್ಯಕ್ರಮ ಆಯೋಜಿಸುವ ಮೂಲಕ ನಾವು ಹಲವಾರು ಸಂದೇಶ ಸಾರಬಹುದು ಎಂದರು.

    ಮಾಜಿ ಸಚಿವ ಅಭಯಚಂದ್ರ ಜೈನ್, ಉದ್ಯಮಿ ಕೆ. ಶ್ರೀಪತಿ ಭಟ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ., ಮೂಡಬಿದಿರೆಯ ಎಂ.ಸಿ.ಎಸ್. ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ, ಕೃಷಿಕ ಮುಳಿಯ ವೆಂಕಟ ಕೃಷ್ಣ ಶರ್ಮ,  ಸಹಾಯಕ  ಅರಣ್ಯ ಸಂರಕ್ಷಣಾಧಿಕಾರಿ ಎನ್ ಸತೀಶ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಬಿ. ಧನಂಜಯ್, ಕೃಷಿ ಜಂಟಿ ನಿರ್ದೇಶಕ ಕೆಂಪೇಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಉದ್ಯಮಿ ಮೊಹಮ್ಮದ್ ಶರೀಫ್, ರಾಜವರ್ಮ ಬೈಲಂಗಡಿ, ಧನಕೀರ್ತಿ ಬಲಿಪ, ಸುಭಾಶ್‍ ಚೌಟ, ಪ್ರವೀಣ್ ಇದ್ದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿದರು.

    ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಹಾಮೇಳಕ್ಕೆ ಭೇಟಿ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    eleven − 6 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.