Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು : ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್
    ಉಡುಪಿ ಜಿಲ್ಲೆ

    ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು : ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್

    Updated:17/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ
    : ಉಡುಪಿಯು ರಕ್ತದಾನಿಗಳ ಜಿಲ್ಲೆಯಾಗಿದ್ದು, ರಕ್ತವನ್ನು ಭೇದ ಭಾವವಿಲ್ಲದೆ ಅಗತ್ಯವಿರುವವರಿಗೆ ನೀಡುವುದು ನಮ್ಮ ಉದ್ದೇಶವಾಗಿದೆ. ರಕ್ತದ ನಿರಂತರ ಸೇವೆಯು ಜನರಿಗೆ ಅವಶ್ಯವಿರುವುದರಿಂದ ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನದಲ್ಲಿ ಪಾಲ್ಗೊಂಡು ಜೀವ ಉಳಿಸುವ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್. ಹೇಳಿದರು.

    Click Here

    Call us

    Click Here

    ಅವರು ಇಂದು ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

    ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಆಸ್ಪತ್ರೆಗಳ ರೋಗಿಗಳಿಗೆ ರಕ್ತದ ಅವಶ್ಯಕತೆಯು ಇರುವುದರಿಂದ ರಕ್ತದಾನ ಮಾಡುವ ಮೂಲಕ ಅಥವಾ ರಕ್ತದಾನಿಗಳ ಮೂಲಕ ರಕ್ತವನ್ನು ಪಡೆದು ಅವರಿಗೆ ನೀಡಿ ಜೀವ ಉಳಿಸಬಹುದು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಕೃತಕ ಅವಯವ ಜೋಡಣಾ ಘಟಕದ ಜೊತೆಗೆ ಮಾಡುತ್ತಿರುವ, ಮಾನವೀಯ ಕಾರ್ಯ, ಸಾಮಾಜಿಕ ಸೇವೆಯ ಬಗ್ಗೆ ಶ್ಲಾಘಿಸಿದರು.

    ಕಾರ್ಯಕ್ರಮದಲ್ಲಿ ಆದರ್ಶ್ ಆಸ್ಪತ್ರೆಯ ನಿರ್ದೇಶಕ ಡಾ. ಜಿ. ಎಸ್. ಚಂದ್ರಶೇಖರ್ ಮಾತನಾಡಿ, ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದೆ. ಯುವ ಜನತೆ ಜೀವನದಲ್ಲಿ ವಿದ್ಯಾಭ್ಯಾಸದೊಂದಿಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ರಕ್ತ ದಾನದಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ರಕ್ತ ದಾನದಿಂದಾಗಿ ನಮ್ಮ ಆರೋಗ್ಯವನ್ನು ವೃದ್ಧಿಸುವುದರೊಂದಿಗೆ ಮತ್ತೊಬ್ಬರ ಜೀವವನ್ನು ರಕ್ಷಿಸಿದಂತಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ರಕ್ತ ದಾನವನ್ನು ಮಾಡಲು ಮುಂದಾಗಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ಯುವಜನತೆಯು ರಕ್ತದಾನದ ಮಹತ್ವವನ್ನು ಅರಿತು ಹೆಚ್ಚು ಹೆಚ್ಚು ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದರು.

    Click here

    Click here

    Click here

    Click Here

    Call us

    Call us

    ಈ ಸಂಧರ್ಭದಲ್ಲಿ ರಕ್ತ ದಾನಿಗಳಾದ ಬನ್ನಾಡಿ ರಾಘವೇಂದ್ರ ಶೆಟ್ಟಿ, ಕುಂದಾಪುರ ಸುದರ್ಶನ್ ಕೆ., ಕೆ. ದೀಪಕ್ ಕಾಮತ್, ಹರೀಶ್ ಅಮೀನ್ ಹಾಗೂ ಚೇತನ್ ಕುಮಾರ್ ಅವರನ್ನು ಗೌರವಿಸಲಾಯಿತು.

    ರೆಡ್‌ಕ್ರಾಸ್ ಆಡಳಿತ ಮಂಡಳಿ ಸದಸ್ಯ ಟಿ. ಚಂದ್ರಶೇಖರ್, ಕಾಲೇಜಿನ ವಿದ್ಯಾರ್ಥಿಗಳು, ರೆಡ್‌ಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಡಾ. ಅಶೋಕ್ ಕುಮಾರ್ ವೈ. ಜಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ರಾಘವೇಂದ್ರ ಪ್ರಭು ಕರ್ವಾಲ್ ನಿರೂಪಿಸಿದರೆ, ರೆಡ್‌ಕ್ರಾಸ್ ಖಜಾಂಜಿ ರಮಾದೇವಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    12 + six =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.