Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಜಗನ್ಮೋಹನ ಹಾಗೂ ಶೋಭಾಯಮಾನ’ ನೂತನ ಕಾಲೇಜು ಸಂಕೀರ್ಣ ಹಾಗೂ ವಸತಿ ನಿಲಯಗಳ ಉದ್ಘಾಟನೆ
    alvas nudisiri

    ‘ಜಗನ್ಮೋಹನ ಹಾಗೂ ಶೋಭಾಯಮಾನ’ ನೂತನ ಕಾಲೇಜು ಸಂಕೀರ್ಣ ಹಾಗೂ ವಸತಿ ನಿಲಯಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾಗಿರಿಯ ಜಗಜ್ಯೋತಿ ಬಸವೇಶ್ವರ ವೃತ್ತದ, ಜ್ಞಾನಯೋಗಿ ಸರ್ವಜ್ಞ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಕಾಲೇಜು ಸಂಕೀರ್ಣ ಹಾಗೂ ವಿದ್ಯಾರ್ಥಿನಿ ವಸತಿ ನಿಲಯದ ಉದ್ಘಾಟನಾ ಸಮಾರಂಭ ನಡೆಯಿತು.

    Click Here

    Call us

    Click Here

    ನೂತನ ಕಾಲೇಜು ಸಂಕೀರ್ಣ-‘ಜಗನ್ಮೋಹನ’ದ ಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ಉದ್ಯಮಿ ಕೆ. ಶ್ರೀಪತಿ ಭಟ್ ನೆರವೇರಿಸಿದರು. 

    ಡಾ. ಎಂ ಮೋಹನ ಆಳ್ವರ ಧರ್ಮಪತ್ನಿ ದಿ. ಶೋಭಾ ಆಳ್ವರ ನೆನಪಿಗಾಗಿ ನೂತನ ವಸತಿ ನಿಲಯಕ್ಕೆ ‘ಶೋಭಾಯಮಾನ’ ಎಂದು ಹೆಸರಿಡಲಾಗಿದ್ದು, ಇದರ ಉದ್ಘಾಟನೆಯನ್ನು ಲಲಿತ ರಾಮಣ್ಣ ಶೆಟ್ಟಿ ಮತ್ತು ಜಯಶ್ರೀ ಅಮರನಾಥ್ ಶೆಟ್ಟಿ ನೇರವೇರಿಸಿದರು.

    ‘ಜಗನ್ಮೋಹನ’ದ ವಿಶೇಷತೆಗಳು:
    ಅತ್ಯಾಧುನಿಕ ವ್ಯವಸ್ಥೆಯನ್ನೊಳಗೊಂಡ ನೂತನ ಕಾಲೇಜು ಕಟ್ಟಡ- ‘ಜಗನ್ಮೋಹನ’ದಲ್ಲಿ 68 ತರಗತಿ ಕೊಠಡಿಗಳಿದ್ದು, 3 ಭೌತಶಾಸ್ತ್ರದ ಲ್ಯಾಬ್, 3 ರಸಾಯಶಾಸ್ತ್ರದ ಲ್ಯಾಬ್, 2 ಜೀವಶಾಸ್ತ್ರದ ಲ್ಯಾಬ್ ಹಾಗೂ ಒಂದು ಸುಸಜ್ಜಿತ ಕಂಪ್ಯೂಟರ್ ಲ್ಯಾಬ್‌ನ್ನು ಹೊಂದಿದೆ. ವಿಶಾಲವಾದ ಸ್ಟಡಿಹಾಲ್‌ನ್ನು ಹೊಂದಿರುವ ಈ ಕಟ್ಟಡ, ಪ್ರತಿಧ್ವನಿ ಮುಕ್ತ ವ್ಯವಸ್ಥೆಯನ್ನು ಹೊಂದಿದೆ. ಪ್ರಶಾಂತ ಪರಿಸರದ ನಡುವೆ, ವಿಶಾಲವಾದ ಹೂದೋಟ, ಸುಂದವಾದ ವಾಕಿಂಗ್ ಟ್ರ್ಯಾಕ್, ಕಟ್ಟಡದ ಒಳಭಾಗದಲ್ಲಿ ಅಮೃತಶಿಲೆಯಿಂದ ನಿರ್ಮಿಸಿದ ಭಗವಾನ್ ಮಹಾವೀರನ ಮೂರ್ತಿ ಮನಸ್ಸಿಗೆ ಆಹ್ಲಾದಕರ ವಾತವರಣವನ್ನು ಒದಗಿಸುತ್ತದೆ.

    ಶೋಭಾಯಮಾನ ವಸತಿ ನಿಲಯ:
    ಶೋಭಾಯಮಾನ ವಸತಿ ನಿಲಯವು ಆಧುನಿಕ ಕಾಲದ ಎಲ್ಲಾ ವ್ಯವಸ್ಥೆಯನ್ನು ಒಳಗೊಂಡ ಸುಸಜ್ಜಿತ ವಸತಿ ಗೃಹವಾಗಿದೆ. 600 ವಿದ್ಯಾರ್ಥಿನಿಯರಿಗೆ ವಸತಿಯನ್ನು ಒದಗಿಸಬಲ್ಲ ಈ ಹಾಸ್ಟೆಲ್, ಎಲ್‌ ಆಕಾರದಲ್ಲಿ ನಿರ್ಮಾಣಗೊಂಡಿದೆ. ವಿದ್ಯಾರ್ಥಿಗಳ ಅನುಕೂಲಕ್ಕನುಗುಣವಾಗಿ ಹಾಸ್ಟೆಲ್‌ನ ರೂಮ್‌ಗಳನ್ನು ನಿರ್ಮಿಸಲಾಗಿದ್ದು, ಪ್ರತೀ ರೂಮ್ ಅಟ್ಯಾಚೆಡ್ ಬಾತ್‌ರೂಮ್ ವ್ಯವಸ್ಥೆಯನ್ನು ಒಳಗೊಂಡಿದೆ.

    Click here

    Click here

    Click here

    Click Here

    Call us

    Call us

    ಎರಡು ಅತ್ಯಾಕರ್ಷಕ ಡೈನಿಂಗ್ ಹಾಲ್‌ಗಳಿದ್ದು, ಒಂದೇ ಕಿಚನ್‌ನಿಂದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇಲ್ಲೂ ವಿಶಾಲವಾದ ಸ್ಟಡಿ ಹಾಲ್‌ನ್ನು ನಿರ್ಮಿಸಲಾಗಿದ್ದು, ವಿದ್ಯಾರ್ಥಿಗಳು ಸದಾ ಕಾಲ ಈ ವ್ಯವಸ್ಥೆಯನ್ನು ಉಪಯೋಗಿಬಹುದಾಗಿದೆ.  24 ಗಂಟೆಗಳ ಸಿಸಿಟಿವಿ ಕಣ್ಗಾವಲಿರುವ ಈ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿರಿಗಳು, ವೈದ್ಯಕೀಯ ತಂಡ, ಆಪ್ತ ಸಲಹೆಗಾರರು, ವಾರ್ಡನ್‌ಗಳು ಸದಾ ಸೇವೆಯಲ್ಲಿ ನಿರತರಾಗಿರುತ್ತಾರೆ.

    ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಉದ್ಯಮಿ ಶ್ರೀಪತಿ ಭಟ್, ಮೀನಾಕ್ಷಿ ಆಳ್ವ, ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ. ವಿನಯ್ ಆಳ್ವ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಶಿಕ್ಷಕೇತರ ವೃಂದದವರು ಪಾಲ್ಗೊಂಡರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    nineteen + 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.