ವಿದ್ಯಾರ್ಥಿನಿಲಯ ಪ್ರವೇಶಾತಿ:  ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ, ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೇ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ವಿದ್ಯಾರ್ಥಿನಿಲಯಗಳ ವಿವರ: ಉಡುಪಿ ತಾಲೂಕಿನ ಬನ್ನಂಜೆಯ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮಶಾಲೆ, ಆದಿ ಉಡುಪಿಯ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿ ನಿಲಯ, ಉಡುಪಿ ಟೌನ್‌ನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಹಾಗೂ ಉಡುಪಿ ಟೌನ್‌ನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ನಿಲಯ.

ಕುಂದಾಪುರ ತಾಲೂಕಿನ ಕುಂದಾಪುರ ಹಾಗೂ ಬೈಂದೂರಿನ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ, ಶಂಕರನಾರಾಯಣದ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ, ಕುಂದಾಪುರ ಟೌನ್‌ನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಹಾಗೂ ಬೈಂದೂರು ಟೌನ್‌ನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ನಿಲಯ.

ಕಾರ್ಕಳ ತಾಲೂಕಿನ ಹೆಬ್ರಿಯ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ, ಅಜೆಕಾರಿನ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಹಾಗೂ ಕಾರ್ಕಳ ಟೌನಿನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ನಿಲಯಗಳಲ್ಲಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ನಿಲಯ ಮೇಲ್ವಿಚಾರಕರಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here

Click here

Click here

Click Here

Call us

Call us

Leave a Reply