ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಯಿಯ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ 43 ದಿನದ ಹಸುಗೂಸು ಸಾವನ್ನಪ್ಪಿದ ಘಟನೆ ಗುಜ್ಜಾಡಿಯಲ್ಲಿ ನಡೆದಿದೆ.
ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಮಗುವೇ ಸಾವನ್ನಪ್ಪಿದ ಮಗು. ಮಂಗಳವಾರ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ತಾಯಿ ಎದೆಹಾಲು ಕುಡಿಸಿ ರೂಮಿನಿಂದ ಹೊರಗೆ ಬಂದಾಗ ಅಜ್ಜ ಲಕ್ಷ್ಮಣ ಮಗುವನ್ನು ನೋಡಲು ಒಳಗೆ ಹೋಗಿದ್ದಾರೆ. ಆಗ ಮಗು ಉಸಿರಾಡುತ್ತಿಲ್ಲ ಎನ್ನುವ ಅನುಮಾನ ಬಂದಿದೆ.
ತಕ್ಷಣ ಮಗುವನ್ನು ಮುಟ್ಟಿದಾಗಲೂ ಯಾವುದೇ ಪ್ರತಿಕ್ರಿಯೆ ಇಲ್ಲದೇ ಇದ್ದು ಮಗುವಿನ ಮೈ ತಣ್ಣಗಾಗಿದ್ದು ನಂತರ ಮಗುವನ್ನು ಕರೆದುಕೊಂಡು ಕುಂದಾಪುರದ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಗಂಗೊಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
► ಬಿಜಾಡಿ: ಸಮುದ್ರದಲ್ಲಿ ಕೊಚ್ಚಿಹೋದ ಐಟಿಐ ವಿದ್ಯಾರ್ಥಿ- https://kundapraa.com/?p=73305 .