ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಂಡ್ಸೆ ಪಬ್ಲಿಕ್ ಸ್ಕೂಲ್‌ಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ  ವತಿಯಿಂದ ವಂಡ್ಸೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಸ್ಮಾರ್ಟ್ ಕ್ಲಾಸ್ ಕೊಡಗೆಯಾಗಿ ನೀಡಲಾಯಿತು.

Call us

Click Here

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಯ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸಾಕಷ್ಟು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮತ್ತು ಇತರೆ ಕೊಡುಗೆ ನೀಡುತ್ತಾ ಬರುತ್ತಿದ್ದೇವೆ. ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ ಎಂದರು.

ಈ ಸಂದರ್ಭ ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಅತಿಥಿಗಳಾಗಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಗುರು ಸೋಮಯಾಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ,ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೀವ ಶೆಟ್ಟಿ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ನಾಗರಾಜ ಪಿ.ಯಡ್ತರೆ, ವಂಡ್ಸೆ ಸರಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ರಾಜೀವ ನಾಯ್ಕ, ಎಸ್.ಡಿ.ಎಮ್.ಸಿ ಸದಸ್ಯ ರಾಘವೇಂದ್ರ ನೆಂಪು, ಭುಜಂಗ ಶೆಟ್ಟಿ ದಂಪತಿಗಳು,ಎಸ್.ಡಿ.ಎಮ್.ಸಿ ಸದಸ್ಯರು  ಮೊದಲಾದವರು ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರವಿರಾಜ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಕುಪ್ಪಯ್ಯ ಮರಾಠಿ ಸ್ವಾಗತಿಸಿದರು. ಶಿಕ್ಷಕ ಗಣೇಶ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಶ್ರೀಧರ ಭಟ್ ವಂದಿಸಿದರು.

Click here

Click here

Click here

Click Here

Call us

Call us

Leave a Reply