ಕುಂದಾಪುರ: ಮಟ್ಟದ ಮಕ್ಕಳ ಸಂಸತ್‌ ಉದ್ಘಾಟನೆ

Call us

Call us

Call us

ಕುಂದಾಪುರ: ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಭವ್ಯ ಭಾರತವನ್ನು ರೂಪಿಸುವಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಶ್ರಮ ವಹಿಸಬೇಕು. ಪ್ರತಿಯೊಬ್ಬನು ಧನಾತ್ಮಕವಾಗಿ ಚಿಂತನೆಯನ್ನು ಮೈಗೂಡಿಸಿಕೊಂಡು ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಬೇಕಾಗಿದೆ ಎಂದು ಕುಂದಾಪುರ ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ ಹೇಳಿದರು.

Call us

Click Here

ಅವರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಕುಂದಾಪುರ, ತಾ.ಪಂ. ಕುಂದಾಪುರ, ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ, ಸಾರ್ವಜನಿಕ ಶಿಕ್ಷಣ ಇಲಾಖೆ ಬೈಂದೂರು ಮತ್ತು ರೋಟರಿ ಕ್ಲಬ್‌ ಮಿಡ್‌ಟೌನ್‌ ಕುಂದಾಪುರ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ, ತಾಲೂಕು ಎಸ್‌. ಡಿ.ಎಂ.ಸಿ. ಸಂಚಲನಾ ಸಮಿತಿ ಕುಂದಾಪುರ ಇವರ ಸಹಯೋಗದಲ್ಲಿ ಸೋಮವಾರ ಕುಂದಾಪುರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಜರಗಿದ ತಾಲೂಕು ಮಟ್ಟದ ಮಕ್ಕಳ ಸಂಸತ್‌ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ತಾ| ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಬಾಬು ಪೈ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಗೌರಿ ದೇವಾಡಿಗ, ತಾ.ಪಂ. ಶಿಕ್ಷಣ ಮತ್ತು ಸ್ಥಾಯಿ ಸಮಿತಿಯ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ನವೀನcಂದ್ರ ಶೆಟ್ಟಿ, ಕುಂದಾಪುರ ಪೊಲೀಸ್‌ ಉಪವಲಯದ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ, ಜೆಸಿಐ ಕುಂದಾಪುರ ಸಿಟಿಯ ನಿಯೋಜಿತ ಅಧ್ಯಕ್ಷ ಮಂಜುನಾಥ್‌ ಕಾಮತ್‌, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಜೊತೆ ಕಾರ್ಯ ದರ್ಶಿ ದೀಪಿಕಾ ಎಸ್‌. ಶೆಟ್ಟಿ, ಕುಂದಾಪುರ ಎಸ್‌ಡಿಎಂಸಿ ಸಂಚಾಲನಾ ಸಮಿತಿಯ ಅಧ್ಯಕ್ಷ ನಾಗರಾಜ್‌, ಸುಮಲತಾ, ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷೆ ಜಾನಕಿ ಬಿಲ್ಲವ ಉಪಸ್ಥಿತರಿದ್ದರು.

ತಾ| ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಘಟನಾ ಕಾರ್ಯದರ್ಶಿ ಹುಸೇನ್‌ ಹೈಕಾಡಿ ಸ್ವಾಗತಿಸಿದರು, ಬಾಬು ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್ಡಿ ಸಂತೋಷ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದ್ದರು.

Leave a Reply