Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡೆಂಗ್ಯೂ, ಮಲೇರಿಯಾ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ
    ಉಡುಪಿ ಜಿಲ್ಲೆ

    ಡೆಂಗ್ಯೂ, ಮಲೇರಿಯಾ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಮಳೆಗಾಲದಲ್ಲಿ ಸಾಮಾನ್ಯವಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವುದರಿಂದ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯಬಾರದು.

    Click Here

    Call us

    Click Here

    ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೂ ಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಶೇಖರಣೆ ಮಾಡುವಂತಹ ಪಾತ್ರೆಗಳಲ್ಲಿ ನಿತ್ಯ ನೀರು ಬದಲಾವಣೆ ಮಾಡಬೇಕು ಹಾಗೂ ಸುತ್ತಮುತ್ತ ನಿಂತ ನೀರು ಕಂಡು ಬಂದರೆ ಅವುಗಳನ್ನು ಸರಾಗವಾಗಿ ಹರಿಯಲು ಅನುವು ಮಾಡಿಕೊಡಬೇಕು.

    ಮಳೆಗಾಲದಲ್ಲಿ ನಿಂತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುವ ಜೊತೆಗೆ ಅನೇಕ ರೀತಿಯ ಕಾಯಿಲೆಗಳು ದೇಹವನ್ನು ಬಾಧಿಸುವ ಕಾರಣ ಮುಂಜಾಗೃತಾ ಕ್ರಮವಾಗಿ ಆರೋಗ್ಯ ಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು, ಡ್ರಂ ಗಳು, ಬ್ಯಾರಲ್, ಮಡಕೆ ಮುಂತಾದ ಮೂಲಗಳಲ್ಲಿ ನೀರಿನ ಶೇಖರಣೆ ವೇಳೆ ಮುಂಜಾಗ್ರತೆ ವಹಿಸಬೇಕು.

    ನೀರು ಸಂಗ್ರಹವಾಗುವ ಓವರ್ ಹೆಡ್‌ಟ್ಯಾಂಕ್‌ಗಳನ್ನು ವಾರಕ್ಕೊಮ್ಮೆ ಪೂರ್ತಿ ನೀರು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಮನೆ ಸುತ್ತಮುತ್ತ, ಅಂಗಡಿ ಮುಂಗಟ್ಟು, ಮನೆ ಪರಿಸರದಲ್ಲಿ ಇರುವ ಅನುಪಯುಕ್ತ ಟಯರ್, ಎಳನೀರು ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಸ್ವಯಂ ರಕ್ಷಣಾ ವಿಧಾನಗಳಿಂದ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಗಳನ್ನು ಉಪಯೋಗಿಸಬೇಕು.  

      ಜ್ವರ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಕೂಡಲೇ ಸ್ಥಳೀಯ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ ಪಡೆಯಬೇಕು. ಕುಡಿಯಲು ಕಾಯಿಸಿ ಆರಿಸಿದ ನೀರನ್ನೇ ಬಳಸುವುದರೊಂದಿಗೆ  ಮಳೆಗಾಲದಲ್ಲಿ ಯಾವುದೇ ಹಾನಿಯಾಗದಂತೆ ಮುಂಜಾಗ್ರತೆ ವಹಿಸುವಲ್ಲಿ ನಗರಸಭೆಯೊಂದಿಗೆ ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    nineteen − 12 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.