ಕುಂದಾಪುರ: ಪಕ್ಷ ಬಲವರ್ಧನೆಗೆ ಕಾರ್ಯಕರ್ತರ ಸಹಕಾರ ಅತೀ ಅಗತ್ಯ. ತಳಮಟ್ಟದಲ್ಲಿ ಕಾರ್ಯಕರ್ತರು ದುಡಿದಾಗ ಪಕ್ಷವನ್ನು ಗೆಲ್ಲಿಸಬಹುದು ಎಂದು ಶಾಸಕ ಗೋಪಾಲ ಪೂಜಾರಿ ಅವರು ಹೇಳಿದರು.
ಆಲೂರು ರಾಮ ಮಂದಿರ ಸಭಾಂಗಣದಲ್ಲಿ ಸೋಮವಾರ ಸಂಜೆ ಜರಗಿದ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರವಿ ಶೆಟ್ಟಿ ಹಳ್ಳಿ, ಗ್ರಾಮ ಪಂಚಾಯತ್ ಸದಸ್ಯರಾದ ಆನಂದ ಗಾಣಿಗ, ಸುರೇಶ್ ದೇವಾಡಿಗ, ಬಾಬು ಗೌಡ ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮೀಣ ಕಾಂಗ್ರೆಸ್ ಘಟಕ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಎಸ್.ಸಿ./ಎಸ್.ಟಿ. ಘಟಕ, ಕಿಸಾನ್ ಮೋರ್ಚಾ ಹಾಗೂ ಪಂಚಾಯತ್ ವ್ಯಾಪ್ತಿಯ 7 ಬೂತ್‌ಗಳ ನೂತನ ಅಧ್ಯಕ್ಷರನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.
ತಾಲೂಕು ಪಂಚಾಯತ್ ಸದಸ್ಯ ಎಚ್. ಮಂಜಯ್ಯ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.