ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕೆ ಸನ್ನಿಧಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ದಂಪತಿ ಸಮೇತರಾಗಿ, ಶಾಸಕ ಗುರುರಾಜ್ ಗಂಟಿಹೊಳೆ ಕುಟುಂಬದೊಂದಿಗೆ ಹಾಗೂ ಸ್ಥಳೀಯ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು.
ಕಳೆದ ವರ್ಷ ಎದುರಾದ ಭೀಕರ ಬರಗಾಲದ ಕಹಿ ನೆನಪು ದೂರವಾಗಿ ಉತ್ತಮ ವರ್ಷಧಾರೆಯ ನಿರೀಕ್ಷೆಯಲ್ಲಿ ರೈತಾಪಿ ವರ್ಗವು ಈಗಾಗಲೇ ಬಿತ್ತನೆಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದು ಉತ್ತಮ ಮಳೆಯಾಗುವ ಮೂಲಕ ರೈತರ ಮೊಗದಲ್ಲಿ ಮಂದಹಾಸ ಮೂಡಿ ನಾಡು ಸುಭೀಕ್ಷವಾಗಿರಲಿ ಎಂದು ಪ್ರಾರ್ಥಿಸಲಾಯಿತು.
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದಿದ್ದು ಉತ್ತಮ ಆಯುಷ್ಯ ಕೊಟ್ಟು ರಾಷ್ಟ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ಕೊಡುವ ಶಕ್ತಿ ನೀಡುವಂತೆ ಹಾಗೂ ನನ್ನ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಇನ್ನಷ್ಟು ಬಲ ಕೊಡುವಂತೆ ವಿಶೇಷವಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಅವರು, ಶ್ರೀ ವೆಂಕಟೇಶ್ ಕಿಣಿ ಅವರು, ಶ್ರೀ ಗುರುಮೂರ್ತಿ ಅವರು, ಶ್ರೀ ಬಳ್ಳೇಕೆರೆ ಸಂತೋಷ ಅವರು, ಶ್ರೀ ಮಾಲತೇಶ್ ಅವರು, ಶ್ರೀ ರಾಜೇಶ್ ಕಾಮತ್ ಅವರು, ಶ್ರೀ ದಿವಾಕರ್ ಶೆಟ್ಟಿ ಅವರು ಸೇರಿದಂತೆ ಮಂಡಲದ ಅನೇಕ ಗಣ್ಯರು ಉಪಸ್ಥಿತರಿದ್ದರು.