ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಮೆರಿಟ್ ಹಾಗೂ ರೋಸ್ಟರ್‌ಗೆ ಅನುಗುಣವಾಗಿ ಆಫ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dtek.kar.nic.in ಅಥವಾ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 9008626222 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.