Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಿ.ಎಂ ವಿಶ್ವಕರ್ಮ ಯೋಜನೆ: ನೋಂದಣಿಗೆ ಸೂಚನೆ
    ಉಡುಪಿ ಜಿಲ್ಲೆ

    ಪಿ.ಎಂ ವಿಶ್ವಕರ್ಮ ಯೋಜನೆ: ನೋಂದಣಿಗೆ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.  
    ಉಡುಪಿ:
    ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಯೋಜನೆಯಡಿ ಬಡಗಿತನ / ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ ತಯಾರಕರು, ಆಭರಣ ತಯಾರಿಕೆ, ಕುಂಬಾರಿಕೆ, ಶಿಲ್ಪಿ, ಪಾದರಕ್ಷೆ ತಯಾರಿಕೆ /ಚರ್ಮಗಾರಿಕೆ, ಗಾರೆ ಕೆಲಸದವರು / ಕಲ್ಲು ಕುಟ್ಟಿಗ, ಬುಟ್ಟಿ / ಚಾಪೆ / ಕಸಪೊರಕೆ ತಯಾರಿಕರು / ತೆಂಗಿನನಾರಿನ ಕೆಲಸಗಾರರು, ಗೊಂಬೆ  / ಆಟಿಕೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಅಗಸರು, ಟೈಲರ್, ಮೀನಿನ ಬಲೆಗಳನ್ನು ನೇಯ್ಗೆ ಮಾಡುವವರು ಮುಂತಾದ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದು, ಜಿಲ್ಲೆಯಲ್ಲಿ ಸುಮಾರು 13,500 ವಿವಿಧ ಕುಶಲಕರ್ಮಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಂಡಿದ್ದು, ಈವರೆಗೂ ನೋಂದಣಿ ಮಾಡದೇ ಇರುವ ಕುಶಲಕರ್ಮಿಗಳೂ ಸಹಾ ನೋಂದಣಿ ಮಾಡಿಕೊಳ್ಳಬಹುದಾಗಿದೆ.

    Click Here

    Call us

    Click Here

    ಮೇಲ್ಕಂಡ ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರುವ, 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರಾಗಿರುವವರು ಕಳೆದ 5 ವರ್ಷಗಳಲ್ಲಿ ಸ್ವಯಂ ಉದ್ಯೋಗ / ವ್ಯಾಪಾರ ಅಭಿವೃದ್ಧಿಗಾಗಿ ಕ್ರೆಡಿಟ್ ಆಧಾರಿತ ಯೋಜನೆಗಳ ಅಡಿಯಲ್ಲಿ ಸಾಲವನ್ನು ಪಡೆದಿರಬಾರದು.

    ಆದಾಗ್ಯೂ ತಮ್ಮ ಸಾಲವನ್ನು ಮರುಪಾವತಿ ಮಾಡಿದ ಮುದ್ರಾ ಮತ್ತು ಪಿ.ಎಂ ಸ್ವನಿಧಿಯ ಫಲಾನುಭವಿಗಳು ಪಿ.ಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ನೋಂದಣಿಗೆ ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೋಂದಣಿಗೆ ಅರ್ಹರಾಗಿದ್ದು, ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು.

    ಕುಶಲಕರ್ಮಿಗಳು ಸಂಬಂಧಿಸಿದ ಗ್ರಾಮ ಪಂಚಾಯತ್ / ನಗರಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಸ್ಥಾಪಿತವಾಗಿರುವ ಸಾಮಾನ್ಯ ಸೌಲಭ್ಯ ಕೇಂದ್ರದಲ್ಲಿ ಮತ್ತು ಆಧಾರ ಆಧಾರಿತ ಬಯೋಮೆಟ್ರಿಕ್ ದೃಢೀಕೃತ ಪಿ.ಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ (ಆಧಾರ್ ಲಿಂಕ್ಡ್), ಬ್ಯಾಂಕ್ ಖಾತೆ ವಿವರಗಳು, ರೇಷನ್ ಕಾರ್ಡ್‌ಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ. ನೊಂದಣಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.

    ನೋಂದಣಿಗೆ ಸಂಬಂಧಿಸಿದಂತೆ ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ವ್ಯವಸ್ಥಾಪಕ ಗೋವರ್ಧನ ಎಚ್. ಮೊ.ಸಂಖ್ಯೆ: 7217623877, 8217840512 ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಪ್ರಸನ್ನಕುಮಾರ ಮೊಬೈಲ್ ಸಂಖ್ಯೆ: 7019032011 ಅನ್ನು ಸಂಪರ್ಕಿಸಬಹುದಾಗಿದೆ.

    Click here

    Click here

    Click here

    Click Here

    Call us

    Call us

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಶಿವಳ್ಳಿ ಕೈಗಾರಿಕಾ ಕೇಂದ್ರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2575650 ಅಥವಾ ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕುಗಳಿಗೆ ಸಂಬಂಧಿಸಿದಂತೆ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ ಮೊ.ಸಂಖ್ಯೆ: 9448623952 ಹಾಗೂ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕುಗಳಿಗೆ ಸಂಬಂಧಿಸಿದಂತೆ ಸಹಾಯಕ ನಿರ್ದೇಶಕ ಜಿ. ವಾಮನ ನಾಯ್ಕ ಮೊ.ಸಂಖ್ಯೆ: 9448409488 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    two × two =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.