Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಧನೆಯಿಂದ ಪ್ರೇರೆಪಿತರಾಗೋಣ: ಡಾ. ಎಂ ಮೋಹನ ಆಳ್ವ
    alvas nudisiri

    ಸಾಧನೆಯಿಂದ ಪ್ರೇರೆಪಿತರಾಗೋಣ: ಡಾ. ಎಂ ಮೋಹನ ಆಳ್ವ

    Updated:24/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ ನರೇಂದ್ರ ನಾಯಕ್‌ರು  ಶೈಕ್ಷಣಿಕ  ಕ್ಷೇತ್ರದಲ್ಲೂ  ಕೃಷಿಯ ಮೂಲಸತ್ವಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಅನುದಾನ ರಹಿತ  ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ(ಕುಪ್ಮಾ) ಅಧ್ಯಕ್ಷ ಡಾ ಎಂ ಮೋಹನ ಆಳ್ವ ನುಡಿದರು.

    Click Here

    Call us

    Click Here

    ಕರ್ನಾಟಕ ಅನುದಾನ ರಹಿತ  ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಮೂಡುಬಿದಿರೆಯ ಆಳ್ವಾಸ್‌ನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡ ಕಲಾ ಪ್ರೇಮಿ, ಶಿಕ್ಷಣ ತಜ್ಞ ಪ್ರೋ. ನರೇಂದ್ರ ಎಲ್ ನಾಯಕ್ ಅವರ ಷಷ್ಟಬ್ದಿ ’ನಮ್ಮೊಲುಮೆ’ ಸಂಮಾನ ಸಮಾರಂಭ  ಮತ್ತು ಕುಪ್ಮಾ ಸದಸ್ಯರ ಸಮಾಗಮ ಕಾರ್ಯಕ್ರಮದಲ್ಲಿ  ಅಭಿನಂದನಾ ನುಡಿಗಳನ್ನಾಡಿದರು.

    ಸಾಧನೆಯಿಂದ ಪ್ರೇರೆಪಿತರಾಗೋಣ:
    ಒಬ್ಬ ಕೃಷಿಕನಲ್ಲಿರುವ ಎಲ್ಲಾ ಮೂಲ ಗುಣಗಳನ್ನು ತಾನು ಸ್ಥಾಪಿಸಿರುವ ಎಕ್ಸ್‍ಪರ್ಟ್ ಕಾಲೇಜಿನಲ್ಲಿ ಆಳವಡಿಸಿಕೊಳ್ಳಲಾಗಿದೆ.  ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯದ ನಡುವೆ  ಶೈಕ್ಷಣಿಕ ಕೃಷಿಯನ್ನು  ನಡೆಸುತ್ತಾ ಕರ್ನಾಟಕದ ವಿಶ್ವಾಸಾರ್ಹ ಪದವಿಪೂರ್ವ ಕಾಲೇಜನ್ನು ಸ್ಥಾಪಿಸಿದ್ದಾರೆ.  ಅವರ ಈ ಸಾಧನೆಯನ್ನು ನಾವೆಲ್ಲರೂ ಅವಲೋಕಿಸಿ ಪ್ರೇರೆಪಿತರಾಗುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಶಿಕ್ಷಣದ ಜೊತೆ ಜೊತೆಯಲ್ಲಿ, ಕಲಾರಾಧಕರಾಗಿ ಕರ್ನಾಟಕ ಸಂಗೀತವನ್ನು ಪರಾಂಗತ ಮಾಡಿಕೊಂಡು,  ಹಾರ್ಮೋನಿಯಂ ನುಡಿಸಿವುದರಲ್ಲೂ ಎತ್ತಿದ ಕೈ ಇವರದ್ದು.

    ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ:
    ಕೆಲವು ದಶಕಗಳ ಹಿಂದೆ ೩೦೦ರೂಪಾಯಿ ಬಾಡಿಗೆ ಕೊಠಡಿಯಲ್ಲಿ ಪ್ರಾರಂಭವಾದ ಇವರ ಕೋಚಿಂಗ್ ಸೆಂಟರ್ ಇಂದು, ಎಕ್ಸಪರ್ಟ್ ಶಿಕ್ಷಣ ಸಂಸ್ಥೆಗಳ ಮೂಲಕ ಕರ್ನಾಟಕದ ಪ್ರಸಿದ್ಧ ಪದವಿಪೂರ್ವ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ. ದಶಕಗಳ ಹಿಂದೆ ಕರಾವಳಿ ಭಾಗದಲ್ಲಿ ಹೆಚ್ಚಿನ ಕಾಲೇಜುಗಳು ಕೇವಲ ಬೋರ್ಡ ಪರೀಕ್ಷೆಗಳಿಗೆ ಗಮನಕೊಡುತ್ತಿದ್ದ ಕಾಲದಲ್ಲಿ, ಸಿಇಟಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಮುಂದೆ ಬಂದವರಲ್ಲಿ ಮೊದಲಿಗರಿವರು.

    ಶೂನ್ಯದಿಂದ ಬಂದು, ತನ್ನ ಗುರಿಯಿಂದ ಎಂದೂ ವಿಚಲಿತರಾಗದೆ,  ತಾನು ನಿರ್ವಹಿಸುವ ಕೆಲಸವನ್ನು ತಪಸ್ಸಿನ ರೀತಿಯಲ್ಲಿ ನಿರ್ವಹಿಸಿದ, ಹಿರಿಮೆ ಇವರದ್ದು. ಬದುಕಿನ ಹಾದಿಯಲ್ಲಿ ಬದಲಾವಣೆಗೆ ಒಗ್ಗಿಕೊಳ್ಳುತ್ತಾ, ಎಂದೂ ತಾನು ನಡೆದು ಬಂದ ದಾರಿಯನ್ನು ಅಲಕ್ಷಿಸದೆ, ಮುನ್ನಡೆಯುತ್ತಿರುವ ನರೇಂದ್ರ ನಾಯಕರು ಕುಪ್ಮಾದ ಎಲ್ಲಾ ಸದಸ್ಯರಿಗೂ ಆದರ್ಶಪ್ರಾಯರು ಎಂದರು.

    Click here

    Click here

    Click here

    Call us

    Call us

    ಖಾಸಗಿ ಸಂಸ್ಥೆಗಳ ಕೊಡುಗೆ ಅಪಾರ:
    ಶಿಕ್ಷಣ ಕ್ಷೇತ್ರಕ್ಕೆ ಖಾಸಗಿ ಸಂಸ್ಥೆಗಳ ಕೊಡುಗೆ ಅಪಾರ. ಸರ್ಕಾರ ನಿರ್ವಹಿಸಬೇಕಾದ ಕೆಲಸವನ್ನು ಪ್ರೈವೇಟ್ ವಿದ್ಯಾ ಸಂಸ್ಥೆಗಳು ಮಾಡುತ್ತಿವೆ. ಶಿಕ್ಷಣ ಎಂದೂ ವ್ಯಾಪಾರೀಕರಣವಾಗಬಾರದು. ಈ ಕ್ಷೇತ್ರದ ಪಾವಿತ್ರತೆಯನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

    ನಿಜವಾದ ಪ್ರೀತಿಯಿಂದ ನೀಡಿದ ಸನ್ಮಾನ:
    ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೋ. ನರೇಂದ್ರ ಎಲ್ ನಾಯಕ್, ಈ ಸನ್ಮಾನ ನಿಜವಾದ ಪ್ರೀತಿಯಿಂದ ನೀಡಿದ ಸನ್ಮಾನವಾಗಿದೆ. ಒಬ್ಬ ವ್ಯಕ್ತಿ, ತಾನು ಮಾಡುವ ಕೆಲಸದಿಂದ ಗೌರವ, ಪ್ರೀತಿಯನ್ನು ಗಳಿಸಲು ಸಾಧ್ಯ. ನಾನು ಪ್ರತೀ ಕೆಲಸವನ್ನು ನಿಸ್ವಾರ್ಥದಿಂದ, ಜೀವನದ ಪ್ರತಿ ಕ್ಷಣವನ್ನು ಅನುಭವಿಸುತ್ತಾ ಕಳೆಯುತ್ತೇನೆ. ಕುಪ್ಮಾದ ಇತರೆ ಸದಸ್ಯರ ಸಾಧನೆ ಮುಂದೆ ನನ್ನ ಸಾಧನೆ ಚಿಕ್ಕದು. ನಿಮ್ಮ ಸಾಧಕರ ಸಾಲಿನಲ್ಲಿ ನನಗೊಂದು ಪುಟ್ಟ ಸ್ಥಾನಕೊಡಿ, ಅಷ್ಟೇ ಸಾಕು ಎಂದು ಸಂತಸವನ್ನು ವ್ಯಕ್ತಪಡಿಸಿದರು.

    ಶಿಕ್ಷಣ ಪ್ರೇಮಿಗಳಿಂದ ಶಿಕ್ಷಣ ಸಂಸ್ಥೆ:
    ಕುಪ್ಮಾದ ಜೊತೆ ಕಾರ್ಯದರ್ಶಿ ಮೈಸೂರಿನ ವಿಶ್ವನಾಥ ಶೇಷಾಚಲ  ಮಾತನಾಡಿ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ರಾಜಕೀಯದ ಹಿನ್ನಲೆಯುಳ್ಳವರು ಸ್ಥಾಪಿಸಿದರೆ, ಕರಾವಳಿಯಲ್ಲಿ ಕಲೆ, ಸಾಹಿತ್ಯ, ಶಿಕ್ಷಣದ ಅಭಿರುಚಿಯುಳ್ಳವರು ಸ್ಥಾಪಿಸುತ್ತಿರುವುದು ಶ್ಲಾಘನೀಯ ಎಂದರು. ತಮ್ಮ ವರ್ತನೆಯಲ್ಲಿ ಆದರ್ಶತುಂಬಿಕೊಂಡಿರುವವರು  ನರೇಂದ್ರ ನಾಯಕರು, ನಮಗೆಲ್ಲರಿಗೆ ಕಾರ್ಯಸಫಲತೆಯಲ್ಲಿ ಜೀವಂತ ಉದಾಹರಣೆ ಎಂದರು.

    ವಿದ್ಯೆ ವಿನಯವುಳ್ಳವನಿಗೆ ಸ್ಥಾನಮಾನ ಬರುತ್ತದೆ ಎಂಬುದಕ್ಕೆ  ನರೇಂದ್ರ ನಾಯಕರು ಉತ್ತಮ ಉದಾಹರಣೆ ಎಂದು ದಾವಣಗೆರೆ ಕುಪ್ಮಾ ಘಟಕದ ಸಂಯೋಜಕ ಎಸ್ ಜೆ ಶ್ರೀಧರ್ ನುಡಿದರು.

    ಜೀವನ ಮರಳಿ ಅರಳಲಿ:
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕುಪ್ಮಾದ ಗೌರವಾಧ್ಯಕ್ಷ ಡಾ. ಎಂ. ಬಿ ಪುರಾಣಿಕ್, ಷಷ್ಟಬ್ದಿ ಆಚರಿಸುತ್ತಿರುವ ನರೇಂದ್ರ ನಾಯಕರ ಜೀವನ ಮರಳಿ ಅರಳಲಿ ಎಂದು ಹಾರೈಸಿದರು.  ಟಿಎಂಎ ಪೈ, ವಿನಯ ಹೆಗ್ಡೆ, ಕುರುಂಜಿ ವೆಂಕಟರಮಣ ಗೌಡರಂತಹ ಮಹಾನ್ ಶಿಕ್ಷಣ ತಜ್ಞರ ಸಾಲಿನಲ್ಲಿ ಡಾ. ಮೋಹನ ಆಳ್ವರು ನಿಲ್ಲುತ್ತಾರೆ ಎಂದರು.

    ಕಾರ್ಯಕ್ರಮದಲ್ಲಿ  ಪ್ರೋ. ನರೇಂದ್ರ ಎಲ್ ನಾಯಕ್ ಹಾಗೂ ಡಾ. ಉಷಾ ಪ್ರಭಾ ನಾಯಕ್ ದಂಪತಿಗಳನ್ನು ಕುಪ್ಮಾವತಿಯಿಂದ ಸನ್ಮಾನಿಸಲಾಯಿತು.

    ಕಾರ್ಯಕ್ರಮ ಆರಂಭದಲ್ಲಿ  ಪ್ರೋ. ನರೇಂದ್ರ ಎಲ್ ನಾಯಕ್‌ರ ಜೀನವ ಆಧಾರಿತ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು.

    ಶಕ್ತಿ ಶಿಕ್ಷಣ ಸಮೂಹದ ಡಾ. ಕೆಸಿ ನಾಕ್,  ಎಕ್ಸ್‌ಪರ್ಟ್ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ನಾಯಕ್ ಇದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ನಿರೂಪಿಸಿ, ಕುಪ್ಮಾ ಉಪಾಧ್ಯಕ್ಷ ಯುವರಾಜ್ ಜೈನ್ ಸ್ವಾಗತಿಸಿ, ಕುಪ್ಮಾ ಉಪಾಧ್ಯಕ್ಷ ಡಾ. ಸುಧಾಕರ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.