ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹಾಲಾಡಿಯಲ್ಲಿ ಅಪ್ತಾಪ್ತ ವಯಸ್ಸಿನ ಯುವತಿಗೆ ತೊಂಬಟ್ಟು ಗ್ರಾಮದ ಯುವಕನೊಂದಿಗೆ ನಡೆದ ಬಾಲ್ಯ ವಿವಾಹದ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಲಾಡಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ನಡೆದ ಬಾಲ್ಯ ವಿವಾಹದ ಬಗ್ಗೆ ಕುಂದಾಪುರ ಸಹಾಯಕ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿ, ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ಪ್ರಕರಣದಲ್ಲಿ ತೊಂಬಟ್ಟು ನಿವಾಸಿ ಭರತ್ ಶೆಟ್ಟಿ, ಯುವತಿಯ ತಂದೆ ಸಂತೋಷ್ ಶೆಟ್ಟಿ ಹಾಗೂ ಆಕೆಯ ಬಾವ ರಾಜೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಹಾಲಾಡಿಯ ಅಪ್ರಾಪ್ತ ವಯಸ್ಸಿನ ಯುವತಿ ಹಾಗೂ ತೊಂಬಟ್ಟಿನ ಭರತ್ ಶೆಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ಮದುವೆಯಾಗುವಂತೆ ಬಾಲಕಿಯನ್ನು ಒತ್ತಾಯಿಸುತ್ತಿದ್ದ. ಬಾಲಕಿ ಕೂಡ ಆತನೊಂದಿಗೆ ಮದುವೆ ಮಾಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದ್ದಾಗಿ ಹೇಳಿದ್ದಾಳೆ.ಬಾಲಕಿಯ ತಂದೆಯು ಮಗಳ ಬೆದರಿಕೆಗೆ ಹೆದರಿ ಮದುವೆ ಮಾಡಿಸಿಕೊಟ್ಟಿದ್ದರು.