ಜನ ಸ್ಪಂದನ ಸಭೆಯಲ್ಲಿ ಜನರಿಗೆ ಸ್ಪಂದಿಸುವ ಕೆಲಸವಾಗಲಿ: ಕೆ. ವಿಕಾಸ್ ಹೆಗ್ಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಆರ್.ಎನ್. ಶೆಟ್ಟಿ ಹಾಲ್ ನಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಜನಸ್ಪಂದನ ಕಾರ್ಯಕ್ರಮ ಕೇವಲ ಕಾಟಚಾರದ ಸಭೆಯಂತಾಗಿದೆ. ಮುಖ್ಯಮಂತ್ರಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜನಸ್ಪಂದನ ಕಾರ್ಯಕ್ರಮವನ್ನು ಕಾಟಚಾರಕ್ಕೆ ಮಾಡಿದ ಸಂಬಂಧಿತ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

Call us

Click Here

ಪತ್ರಿಕೆಯವರನ್ನು, ವಿವಿಧ ಸ್ಥರದ ಜನಪ್ರತಿನಿದಿನಗಳನ್ನು ಕಾಟಚಾರಕ್ಕೆ ಸಭೆಗೆ ಆಹ್ವಾನ ನೀಡಿ, ಸಭೆಯಲ್ಲಿ ಅರ್ಜಿಗಳ ವಿಲೇವಾರಿ ಹೆಸರಲ್ಲಿ ಮಾಧ್ಯಮದವರನ್ನು, ಜನಪ್ರತಿನಿದಿನಗಳನ್ನು, ಸಾರ್ವಜನಿಕರನ್ನು ಕತ್ತಲೆಯಲ್ಲಿ ಇಟ್ಟು ಅವರಷ್ಟಕ್ಕೆ ಅವರು ಸಭೆ ನಡೆಸಿದ್ದು ಸರ್ಕಾರದ ಜನಪರ ಕಾರ್ಯಕ್ರಮವಾದ ಜನ ಸ್ಪಂದನ ಕಾರ್ಯಕ್ರಮಕ್ಕೆ ಮಾಡಿದ ಅವಮಾನವಾಗಿದೆ.

ಈ ಬಗ್ಗೆ ಕುಂದಾಪುರ ಹಾಗೂ ಬೈಂದೂರು ಶಾಸಕರ ಎದುರಲ್ಲಿ ಧ್ವನಿ ಎತ್ತಿದ ಸಾರ್ವಜನಿಕರು ಹಾಗೂ ಮಾಧ್ಯಮದವರ ವಿರುದ್ಧ ಜಿಲ್ಲಾಡಳಿತ ಬಾಯಿಮುಚ್ಚಿಸುವ ಪ್ರಯತ್ನ ಮಾಡಿದ್ದು ಜನವಿರೋಧಿ ಕ್ರಮವಾಗಿದೆ. ಸರಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜನಸ್ಪಂದನ ಕಾರ್ಯಕ್ರಮವನ್ನು ಕಾಟಚಾರಕ್ಕೆ ಮಾಡಿದ ಸಂಬಂಧಿತ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

three + 1 =