ನಾಯ್ಕನಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ” ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು – 300 ಟ್ರೀಸ್ ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ನಾಯ್ಕನಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಿರುವ  ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಮತ್ತು  ಕ್ರೀಡಾ ಸಾಮಾಗ್ರಿಗಳನ್ನು ಒಳಗೊಂಡ  ‘ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ’ವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು.

Call us

Click Here

ಗ್ರಂಥಾಲಯಕ್ಕೆ ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾoತರಿಸಿದರು ಹಾಗೂ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಆಯೋಜಿಸಿದ  ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು  ನಂತರ ಮಾತನಾಡಿದ ಶಾಸಕರು ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್  ಬಗ್ಗೆ ವಿವರಿಸಿದರು. ಊರಿನ ಶಾಲೆ ಅಭಿವೃದ್ಧಿಯಲ್ಲಿ ರಾಜಕೀಯ ಮಾಡದೆ ಎಲ್ಲರೂ ಸೇರಿ ಪ್ರಯತ್ನ ಮಾಡೋಣ ಎಂದು ತಿಳಿಸುತ್ತ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಊರ, ಪರ ಊರ ದಾನಿಗಳ ನೆರವನ್ನೂ ಸ್ಮರಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಸ್ವಯಂಸ್ಪೂರ್ತಿ ಫೌಂಡೇಶನ್ ಜಡ್ಕಲ್ ನಾಗರಾಜ ಶೆಟ್ಟಿ ಅವರು, ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹತ್ವಾಕಾಂಕ್ಷೆಯಿಂದ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ”ವನ್ನು ಸ್ಥಾಪಿಸಲಾಗಿದೆ ಹಾಗೂ ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದ ಪಡೆಯಲಿ ಎಂದು  ತಿಳಿಸಿದರು.

ಅತಿಥಿಯಾಗಿ ಎಸ್.ಡಿ.ಎಂ.ಸಿ ಅಧ್ಯಕ್ಷರು, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಮುಖ್ಯೋಪಧ್ಯಾಯ ಮಹಾದೇವ ಬಿಲ್ಲವ, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply