ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತೋಟಕ್ಕೆಂದು ತೆರಳಿದ ಕೃಷಿಕ ನೋರ್ವ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಹಾಲಾಡಿ ಗ್ರಾಮದ ಶೇಖರ ಶೆಟ್ಟಿ (74) ಮೃತ ವ್ಯಕ್ತಿಯಾಗಿದ್ದಾರೆ.
ಅಡಿಕೆ ತೋಟಕ್ಕೆಂದು ತೆರಳಿದವರು ಮನೆಯ ಹಿಂಬದಿಯಲ್ಲಿದ್ದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.