ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲೆಯಿಂದ ಬಂದ ಇಬ್ಬರು ಮಕ್ಕಳು ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ಳಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಚಿಕ್ಕನಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು ಛಾಯ (7) ಎಂದು ಗುರುತಿಸಲಾಗಿದೆ.
ವಂಡ್ಸೆ ಶಾಲೆಯ ವಿದ್ಯಾರ್ಥಿಗಳಾದ ಧನರಾಜ್ ಹಾಗೂ ಛಾಯಾ ಶಾಲಾ ವಾಹನದಲ್ಲಿ ಮನೆಗೆ ಹಿಂದಿರುಗಿದ್ದು, ಈ ವೇಳೆ ನಿತ್ಯವೂ ಇಳಿಯುತ್ತಿದ್ದ ನಿಲ್ದಾಣದಲ್ಲಿ ಇಳಿದಿದ್ದು, ಅಲ್ಲಿಂದ ಅವರ ತಾಯಿ ಛಾಯಾ ಬಂದು ಮನೆಗೆ ಕರೆದೊಯ್ದಿದ್ದರು ಎನ್ನಲಾಗಿದೆ. ಈ ನಡುವೆ ಮಾರ್ಗಮಧ್ಯೆ ಇರುವ ಕೆರೆಯ ಬಳಿಗೆ ಮಕ್ಕಳು ಏಕೆ ತೆರಳಿದರು ಎಂಬ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ.
ಮಕ್ಕಳ ರಕ್ಷಣೆಗೆ ಮುಂದಾದ ತಾಯಿ ಶೀಲಾ ಅಸ್ವಸ್ಥಗೊಂಡು, ಆಕೆಯನ್ನು ಸ್ಥಳೀಯರು ರಕ್ಷಿಸಿದ್ದು, ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










