ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಅರ್ಬನ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಮಣಿಕಂಠ ಎಸ್ ದೇವಾಡಿಗ ಅಧ್ಯಕ್ಷತೆಯಲ್ಲಿ ನಡೆಯಿತು.
ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರ ತೇಜ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘವು 3ನೇ ಆರ್ಥಿಕ ವರ್ಷದಲ್ಲಿ ಲಾಭದೊಂದಿಗೆ ಉತ್ತಮ ಪ್ರಗತಿ ಸಾಧಿಸಿದ್ದು ಸಂಘದ ಅಧ್ಯಕ್ಷರು ಮಾನ್ಯ ಸದಸ್ಯರಿಗೆ 8% ಡಿವಿಡೆಂಟ್ ನೀಡುವುದಾಗಿ ಘೋಷಣೆ ಮಾಡಿದರು.



ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಸರ್ಕಾರಿ ನಿವೃತ್ತ ಸದಸ್ಯರಿಗೆ ಸನ್ಮಾನ, ಸ.ಪ.ಪೂ.ಕಾಲೇಜು ಬೈಂದೂರು ಇವರಿಗೆ ಶೈಕ್ಷಣಿಕ ಸಹಾಯಧನ ವಿತರಣೆ, ಸ್ವ ಸಹಾಯ ಗುಂಪಿನ ಸದಸ್ಯರಿಗೆ ವಿಶೇಷ ಪ್ರಶಸ್ತಿ ಮತ್ತು ಸಂಘದ ಸದಸ್ಯರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.
ಸಭೆಯಲ್ಲಿ ಉಪಾಧ್ಯಕರು ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ವರದಿ ವಾಚಿಸಿದರು.










