ಕುಂದಾಪುರ: ಸ.ಪ.ಪೂ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ 150 ವಿದ್ಯಾರ್ಥಿಗಳ ಉಚಿತ ಊಟದ ವ್ಯವಸ್ಥೆಗೆ ಚಾಲನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿಗೆ  ದೂರದಿಂದ ಆಗಮಿಸುವ 150 ವಿದ್ಯಾರ್ಥಿಗಳ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಚಾಲನೆ ನೀಡಲಾಯಿತು.

Call us

Click Here

ಹಳೇ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಸೀತಾರಾಮ ನಕ್ಕತ್ತಾಯ,  ನಾರಾಯಣ,  ಯು. ಎಸ್. ಶೆಣೈ ವಿದ್ಯಾರ್ಥಿಗಳಿಗೆ ಊಟ ಬಡಿಸುವುದರೊಂದಿಗೆ ಚಾಲನೆ ನೀಡಿದರು. ಕೆಲ ವರ್ಷಗಳಿಂದ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ., ಉಪಪ್ರಾಂಶುಪಾಲರಾದ  ಕಿರಣ್ ಹೆಗ್ಡೆ, ಊಟದ ಉಸ್ತುವಾರಿ ಉಪನ್ಯಾಸಕರಾದ ಉದಯ್ ಕುಮಾರ್ ಶೆಟ್ಟಿ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Leave a Reply