ಕುಂದಾಪುರ: ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರ ಖಂಡಿಸಿ ಎನ್‌.ಎಸ್.ಯು.ಐ ಪ್ರತಿಭಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರದಿಂದಾಗಿ ಈ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ 720 ಅಂಕಕ್ಕೆ 720 ಅಂಕವನ್ನು 67 ವಿದ್ಯಾರ್ಥಿಗಳು ಪಡೆದಿರುವುದು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಸ್ಪಷ್ಟ. ಉತ್ತರಭಾರತದವರೇ ಅವಕಾಶ ಪಡೆದಿದ್ದು ಇದರಿಂದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡಿದಂತಾಗಿದೆ. ಇಂಥಹ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ನಿರ್ವಹಿಸಲಾಗದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಎನ್.ಎಸ್.ಯು.ಐ ಜಿಲ್ಲಾ ಅಧ್ಯಕ್ಷ ಸೌರಭ್ ಬಲ್ಲಾಳ್ ಹೇಳಿದರು.

Call us

Click Here

ಕುಂದಾಪುರ ಬ್ಲಾಕ್ ಕಾಂಗ್ರೆಸ್, ಎನ್.ಎಸ್.ಯು.ಐ ಕುಂದಾಪುರ ವಿಧಾನಸಭಾ ಕ್ಷೇತ್ರ ಇವರ ಜಂಟಿ ಆಶ್ರಯದಲ್ಲಿ ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರ ಖಂಡಿಸಿ ಕುಂದಾಪುರ ಶಾಸ್ತ್ರೀವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಎಲ್ಲರಿಗೂ ಸ್ಷಷ್ಟವಾಗಿದ್ದರೂ ಕೂಡಾ ಈ ಭಾಗದ ಯಾವುದೇ ಬಿಜೆಪಿ ಸಂಸದರಾಗಲಿ, ಶಾಸಕರಾಗಲಿ ಮಾತನಾಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಆದ ಅನ್ಯಾಯದ ಬಗ್ಗೆ ಧ್ವನಿಯೆತ್ತುತ್ತಿಲ್ಲ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರು ಈ ಬಗ್ಗೆ ಧ್ವನಿ ಎತ್ತಬೇಕಾಗಿದೆ. ಈ ಬಗ್ಗೆ ಅವರು ಮೌನ ವಹಿಸಿದರೆ ಅವರ ಮನೆ ಮುಂದೆಯೇ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ ಮಾತನಾಡಿ, ಪರೀಕ್ಷಾ ಅಕ್ರಮದ ಬಗ್ಗೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು, 2014ರಿಂದ ನೀಟ್ ಪರೀಕ್ಷೆಯಲ್ಲಿ ಒಬ್ಬರೋ ಇಬ್ಬರೋ 720 ಅಂಕ ಪಡೆಯುತ್ತಿದ್ದರು. ಆದರೆ ಈ ಬಾರಿ ಹರಿಯಾಣ ಒಂದೇ ಕಡೆ 17 ವಿದ್ಯಾರ್ಥಿಗಳು 720 ಅಂಕ ಪಡೆದಿದ್ದಾರೆ.

ಒಟ್ಟು 67 ವಿದ್ಯಾರ್ಥಿಗಳು 720 ಅಂಕ ಪಡೆದಿದ್ದಾರೆ ಎಂದರೆ ಎಷ್ಟರ ಮಟ್ಟಿಗೆ ಇಲ್ಲಿ ಅಕ್ರಮ ನಡೆದಿದೆ ಎನ್ನುವುದು ಸ್ಪಷ್ಟ. ಇಂಥಹ ಅನ್ಯಾಯವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲೇಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಮಾತನಾಡಿದರು.ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ಎನ್.ಎಸ್.ಯು.ಐ ಕುಂದಾಪುರ ತಾಲೂಕು ಅಧ್ಯಕ್ಷ ಸುಜನ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಪಕ್ಷದ ಪ್ರಮುಖರಾದ ಅಶೋಕ ಪೂಜಾರಿ, ಆಶಾ ಕರ್ವಾಲ್ಲೋ, ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಶ್ರೀಧರ ಶೇರೆಗಾರ್, ಎನ್.ಎಸ್.ಯು.ಐ ನ ಪುರ್ಖಾನ್ ಯಾಸೀನ್, ಅನೀಶ್ ಪೂಜಾರಿ, ಸ್ವಸ್ತಿಕ್ ಶೆಟ್ಟಿ, ವಿವೇಕ್, ಕಾನಿಷ್ಕ ಹೆಗ್ಡೆ, ಸ್ಕಂದ, ಚಂದ್ರಕಾಂತ್, ಸಂಜಯ್ ಶೇರೆಗಾರ್, ರೋಹನ್ ಪೂಜಾರಿ, ವಿಶ್ವಾಸ್, ಸಮ್ಮಿ ಮಹಮ್ಮದ್, ಭಾರ್ಗವ್, ಸಂಪತ್ ಜಿ. ಶೆಟ್ಟಿ,, ಸೌರಭ್ ಶೆಟ್ಟಿ ಹಾಜರಿದ್ದರು.

Click here

Click here

Click here

Click Here

Call us

Call us

Leave a Reply