ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೈತರಿಗೆ ನಿಗಧಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ 4(4) (ಬಿ) (2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/Service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.
ಪಹಣಿಯೊಂದಿಗೆ ಆಧಾರ್ ಜೋಡಣೆಗೆ ಜುಲೈ 31 ಕೊನೆಯ ದಿನವಾಗಿದ್ದು, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರಕಾರಿ ಸೌಲಭ್ಯದಿಂದ ವಂಚಿತರಾಗಬಾರದೆಂಬ ಹಿನ್ನಲೆಯಲ್ಲಿ 2024 ರ ಜುಲೈ ಅಂತ್ಯದೊಳಗಾಗಿ ಕುಂದಾಪುರ ತಾಲೂಕಿನ ರೈತರು ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರ ಶೋಭಾಲಕ್ಷ್ಮೀ ಎಚ್. ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.