ಕುಸಿಯುವ ಭೀತಿಯಲ್ಲಿ ಬೆಳ್ಕಲ್ ಸರಕಾರಿ ಶಾಲೆ ಮುಂಭಾಗದ ಕಿರುಸೇತುವೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ಜು.05:
ಜಡ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿಗುಂಡಿ, ವಾಟೆಗುಂಡಿ ಸಂಪರ್ಕಿಸುವ ಕಿರು ಸೇತುವೆ ನೀರಿನ ರಭಸಕ್ಕೆ ಕುಸಿಯುವ ಭೀತಿ ಉಂಟಾಗಿದೆ.

Call us

Click Here

ಬೆಳ್ಕಲ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಾಕಿಕೊಂಡಿರುವ ಈ ಕಿರುಸೇತುವೆಯ ಅಡಿಪಾಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಕಂಬಗಳು ವಾಲಿಕೊಂಡಿದೆ. ಸೇತುವೆಯ ಮೇಲ್ಭಾಗದಲ್ಲಿಯೂ ಅನೇಕ ಕಡೆ ಬಿರುಕು ಬಿಟ್ಟಿದ್ದು, ಕುಸಿದು ಬೀಳುವ ಅಪಾಯದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಈ ಹೊಳೆಗೆ ಹೊಂದಿಕೊಂಡಿರುವ ಶಾಲೆಗೂ ಕೂಡ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ದಿನನಿತ್ಯ ಸುತ್ತ-ಮುತ್ತಲಿನ ಪ್ರದೇಶಗಳಿಂದ ಬೆಳ್ಕಲ್ ಶಾಲೆ, ಅಂಗನವಾಡಿಗೆ ಹೋಗುವ ಮಕ್ಕಳಿಗೆ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗಾಗಿ ತಿರುಗಾಡುವ ಸ್ಥಳೀಯರಿಗೆ ಇದೇ ಪ್ರಮುಖ ಸಂಪರ್ಕ ಸೇತುವೆಯಾಗಿದ್ದು, ಸೇತುವೆ ಮಳೆಯ ರಭಸಕ್ಕೆ ಕುಸಿದುಬಿದ್ದಲ್ಲಿ ಈ ಭಾಗದ ಜನಸಂಪರ್ಕಕ್ಕೆ ತೊಡಕಾಗುವ ಸಾಧ್ಯತೆಗಳಿದೆ.

ಜಡ್ಕಲ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸತೀಶ್ ತೋಳಾರ್, ಗ್ರಾಮ ಪಂಚಾಯತ್ ಸದಸ್ಯ ಶ್ರೀನಿವಾಸ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply