ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ ಜಿಕೆ ಅವರು ವಹಿಸಿದ್ದರು. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಹಿಂದಿನ ವಿದ್ಯಾರ್ಥಿ ಸಿ.ಎ ಸುದೀಪ್ ಶೆಟ್ಟಿ ಅವರು ಕೊಡಮಾಡಿದ ಬೆಳ್ಳಿಯ ಕ್ವಾಯಿನನ್ನು ಉಡುಗೊರೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಧನೆ ಹಾಗೂ ಕಾಲೇಜಿನ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ, ಮೂಕಾಂಬಿಕ ಪದವಿ ಪೂರ್ವ ಕಾಲೇಜು ಈ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದು ಎಂದು ಹೇಳಲು ನಾನು ಅತ್ಯಂತ ಹೆಮ್ಮೆ ಪಡುತ್ತೇನೆ. ಈ ಕಾಲೇಜಿನಲ್ಲಿ ಕಲಿತ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವಂತರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರರು , ವಸತಿ ನಿಲಯದ ಮೇಲ್ವಿಚಾರಕರು, ಪೋಷಕರು ಇನ್ನಿತರು ಉಪಸ್ಥಿತರಿದ್ದರು.
ಆಂಗ್ಲ ಭಾಷಾ ಉಪನ್ಯಾಸಕಿ ಪೂರ್ಣಿಮಾ ಎನ್. ಜೋಯಿಸ್ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಎಂ. ವಾಸುದೇವ ಉಡುಪ ವಿದ್ಯಾರ್ಥಿಗಳ ಪಟ್ಟಿ ವಾಚಿಸಿ, ಗಣಕಶಾಸ್ತ್ರ ಉಪನ್ಯಾಸಕ ರಾಮ ನಾಯಕ್ ಕೆ .ಬಿ ವಂದಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಜ್ಯೋತಿ ಬಿ. ಶೆಟ್ಟಿ ನಿರೂಪಿಸಿದರು.