ಕುಂದಾಪುರ ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜು: ವಿಶೇಷ ಡಿಪಿಪಿ ತರಗತಿ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿನ ಸ್ಪಧಾತ್ಮಕ ಪರೀಕ್ಷೆಗಳಾದ ನೀಟ್‌, ಜೆಇಇ,  ಸಿಇಟಿ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ವಿಶೇಷ ಡಿಪಿಪಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು.

Call us

Click Here

ಕಾರ್ಯಕ್ರಮದ ಉದ್ಘಾಟನೆಯನ್ನು  ನೀಟ್‌, ಜೆಇಇ, ಸಿಇಟಿ ಕೋರ್ಸ್‍ಗಳ ಅನುಭವಿ ಹಿರಿಯ ಉಪನ್ಯಾಸಕರಾದ ಮಿ. ಬಾಲಾಜಿ ಗುಪ್ತ ಅವರ ಮಾಗದರ್ಶನದಲ್ಲಿ ಡಿಪಿಪಿ ತಂಡದ ಅನುಭವಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು.

ಈ ಒಂದು ಸುಂದರ ಕಾರ್ಯಕ್ರಮದಲ್ಲಿ ಅವರೊಂದಿಗೆ ಎಂ. ಎಂ. ಹೆಗ್ಡೆ ಎಜುಕೇಶನಲ್‌ & ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಎಂ. ಮಹೇಶ್‌ ಹೆಗ್ಡೆ ಮಾತನಾಡಿ ಡಿಪಿಪಿ ತರಗತಿಯ ಮೌಲ್ಯಗಳನ್ನು ಅರಿತು ಅದನ್ನು ಹೇಗೆ ಸದುಪಯೋಗಪಡಿಸಿಕೋಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಸಿಕೊಟ್ಟರು.

ಈ ಕುರಿತು ಮಾತನಾಡಿದ ಮಿ. ಬಾಲಾಜಿ ಗುಪ್ತ ಅವರು ವಿದ್ಯಾರ್ಥಿಗಳ ಭವಿಷ್ಯತ್ತಿನ ಬೆಳಕಿಗೆ ಡಿಪಿಪಿ ತರಗತಿಯ ಅಗತ್ಯತೆಯನ್ನು ಹಾಗೂ ನೀಟ್‌, ಜೆಇಇ,  ಸಿಇಟಿ ಪರೀಕ್ಷೆಯ ಸಿದ್ಧತೆಯ ಕುರಿತು ಪೂರ್ವತಯಾರಿಯ ವಿಧಾನಗಳನ್ನು ಬೋಧಿಸಿದರು.

ಮುಖ್ಯ ಅತಿಥಿಯಾಗಿ ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್‌ ಶೆಟ್ಟಿ, ಡಿಪಿಪಿ ಕ್ಲಾಸ್‌ನ ಸಂಯೋಜಕರಾದ ಹರಿಶರ್ಮ, ಅಶೋಕ್‌ ಸಿ. ಹೆಚ್, ಸ್ಮಿತಲ್‌ ಪದ್ಮಜಾ ಮತ್ತು ಶುಭಾ ಶೆಟ್ಟಿ ಇನ್ನಿತರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply